ಬಿದರಕೆರೆಯನ್ನು ಕೆರೆ ತುಂಬಿಸುವ ಯೋಜನೆಗೆ ಸೇರ್ಪಡೆಗೆ ಆಗ್ರಹಿಸಿ ಮನವಿ
ಜಗಳೂರು: ಜಗಳೂರು ತಾಲೂಕು ಬಿದರಕೆರೆಯನ್ನು 57 ಕೆರೆ ತುಂಬಿಸುವ ಯೋಜನೆಯಡಿ ಸೇರ್ಪಡೆ ಮಾಡಬೇಕೆಂದು ಬಿದರಿಕೆರೆ ಸುತ್ತಮುತ್ತಲಿನ ಗ್ರಾಮಸ್ಥರು ಮನವಿ ಸಲ್ಲಿಸಿದರು
ಕಳೆದ ಹತ್ತು ವರ್ಷಗಳಿಂದ ಬರಗಾಲ ಆವರಿಸಿ ನೀರಾವರಿ ಮೂಲಗಳಿಂದ ಕುಡಿಯುವ ನೀರಿಗೂ ಹಾಹಾಕಾರ ಹೆಚ್ಚುತ್ತಿದೆ. ಸಕಾಲದಲ್ಲಿ ಮಳೆ ಬೆಳೆ ಇಲ್ಲದೆ ಸಾಲದ ಸುಳಿಯಲ್ಲಿ ರೈತರು ಸಿಲುಕಿದ್ದಾರೆ, ಅನೇಕ ಬಾರಿ ಸರ್ಕಾರಕ್ಕೆ ಮನವಿ ಮಾಡಿದರು ಕೆರೆ ತುಂಬಿಸುವ ಯೋಜನೆ ಸಾಕಾರಗೊಂಡಿದೆ
ಈ ಕೂಡಲೇ ಕೆರೆ ತುಂಬಿಸುವ ಯೋಜನೆಗೆ ಸೇರ್ಪಡೆಗೊಳಿಸಿ ರೈತರಿಗೆ ನೀರಾವರಿ ಕಲ್ಪಿಸಿಕೊಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು ಈ ಸಂದರ್ಭದಲ್ಲಿ ನಿಂಗಪ್ಪ ರಾಜಶೇಖರ್ ಬಸವರಾಜ್ ಮಂಜುನಾಥ್ ರಾಘವೇಂದ್ರ ಸೇರಿದಂತೆ ಗ್ರಾಮಸ್ಥರು ಇದ್ದರು