Big Expose: ನ್ಯಾಯಬೆಲೆ ಅಂಗಡಿಗೆ ಸಾಗಿಸುವ ಪಡಿತರ ಕಾಳಸಂತೆಗೆ ಮಾರ್ಗಂತರ.! ಗುತ್ತಿಗೆದಾರ ಶಶಿಧರ್ ವಿರುದ್ದ ಎಫ್ ಐ ಆರ್ ದಾಖಲು

ದಾವಣಗೆರೆ: (Big Expose) ದಾವಣಗೆರೆಯ ಹರಿಹರ ತಾಲ್ಲೂಕಿನ ಸಾರ್ವಜನಿಕ ಪಡಿತರ ಸಾಗಾಣಿಕೆಗಾಗಿ ಗುತರತಿಗೆ ಪಡೆದಿದ್ದ ಗುತ್ತಿಗೆದಾರನಿಂದ ಸಕ್ರಮದ ಹೆಸರಿನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಮಲೆಬೆನ್ನೂರು ಪೋಲೀಸ್ ಠಾಣೆಯಲ್ಲಿ ಪಡಿತರ ಸಾಗಾಣಿಕೆ ಗುತ್ತಿಗೆದಾರ ಶಶಿಧರ್ ಹಾಗೂ ಲಾರಿ, ಚಾಖನ ವಿರುದ್ದ ಇಸಿ ಆಕ್ಟ್ ನಡಿ ಎಫ್ ಐ ಆರ್ ದಾಖಲಿಸಲಾಗಿದೆ.
ದೂರಿನ ಸಾರಾಂಶ ಕೆಳಗಂಡಂತಿದೆ:
ಪಡಿತರ ಅಕ್ಕಿ ಕಾಳಸಂತೆಗೆ ಸಾಗಣೆ ಯತ್ನ: ಲಾರಿ ಚಾಲಕ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲು
50 ಕೆ.ಜಿ. ತೂಕದ 361 ಚೀಲಗಳ ಪಡಿತರ ಅಕ್ಕಿ ವಶ
ಹರಿಹರ ತಾಲ್ಲೂಕಿನ ವಾಸನ ಗ್ರಾಮದಲ್ಲಿ ಸಾರ್ವಜನಿಕರಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುವ ಯತ್ನ ವಿಫಲಗೊಂಡಿದ್ದು, ಈ ಸಂಬಂಧ ಲಾರಿ ಚಾಲಕ ಹಾಗೂ ಮಾಲೀಕರ ವಿರುದ್ಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನಾಂಕ 17/04/2025 ರಂದು ರಾತ್ರಿ 7.15ರ ಸುಮಾರಿಗೆ ವಾಸನ ಗ್ರಾಮದ ಬಳಿ ಕೆಎ-17/ಎಬಿ-1423 ಲಾರಿಯಲ್ಲಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ವಾಹನವನ್ನು ತಡೆದು ಪರಿಶೀಲಿಸಿದ್ದಾರೆ. ಈ ವೇಳೆ ಲಾರಿಯಲ್ಲಿ ಸುಮಾರು 50 ಕೆ.ಜಿ ತೂಕದ 361 ಚೀಲಗಳ ಪಡಿತರ ಅಕ್ಕಿ ಪತ್ತೆಯಾಗಿದೆ. ಲಾರಿ ಚಾಲಕನು ಅಕ್ಕಿಗೆ ಸಂಬಂಧಿಸಿದ ಯಾವುದೇ ಸೂಕ್ತ ದಾಖಲೆಗಳನ್ನು ಹಾಜರುಪಡಿಸದ ಕಾರಣ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಆಹಾರ ನಿರೀಕ್ಷಕ ಎಸ್.ಬಿ ಶಿವಕುಮಾರ್ ಅವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ತನಿಖೆಯ ಸಂದರ್ಭದಲ್ಲಿ, ಈ ಅಕ್ಕಿಯನ್ನು ವಾಸನ ಗ್ರಾಮದ ನ್ಯಾಯಬೆಲೆ ಅಂಗಡಿಗೆ ವಿತರಿಸಲು ಕಳುಹಿಸಲಾಗಿತ್ತು ಎಂದು ತಿಳಿದುಬಂದಿದೆ. ಆದರೆ, ಬಾತ್ಮಿದಾರರೊಬ್ಬರು ನೀಡಿದ ಮಾಹಿತಿಯ ಪ್ರಕಾರ, ಲಾರಿಯನ್ನು ನೇರವಾಗಿ ನ್ಯಾಯಬೆಲೆ ಅಂಗಡಿಗೆ ಕೊಂಡೊಯ್ಯದೆ, ಅಕ್ರಮವಾಗಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಬೇರೆಡೆಗೆ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಕೂಡ ವೈರಲ್ ಆಗಿದೆ ಎನ್ನಲಾಗಿದೆ. ಅಲ್ಲದೆ, ವಾಸನ ನ್ಯಾಯಬೆಲೆ ಅಂಗಡಿಯ ಕಾರ್ಯದರ್ಶಿ ಅವರನ್ನು ಸಂಪರ್ಕಿಸಿದಾಗ, ಅವರಿಗೆ ನಿಗದಿತ ಪಡಿತರ ಅಕ್ಕಿ ತಲುಪಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ, ಹರಿಹರ ತಾಲ್ಲೂಕಿನ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರ ಲಾರಿ ಮೂಲಕ ನ್ಯಾಯಬೆಲೆ ಅಂಗಡಿಗೆ ತಲುಪಬೇಕಿದ್ದ ಪಡಿತರವನ್ನು ಬೇರೆಡೆಗೆ ಸಾಗಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ, ಲಾರಿ ಮಾಲೀಕ ಶಶಿಧರ್ ಹೆಚ್.ಎಂ ಹಾಗೂ ಲಾರಿ ಚಾಲಕನ ವಿರುದ್ಧ ಕಲಂ 3 ಮತ್ತು 7 ಇ.ಸಿ ಆಕ್ಟ್-1955 ಹಾಗೂ 18 ಪಿಡಿಎಸ್ ರೂಲ್ ಅನ್ವಯ ಮಲೆಬೆನ್ನೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದ ತನಿಖಾಧಿಕಾರಿಯಾಗಿ ಪಿಎಸ್ಐ ಪ್ರಭು ಡಿ ಕೆಳಗಿನಮನಿ ಅವರನ್ನು ನೇಮಿಸಲಾಗಿದೆ.