birthday; ಡಿ. ದೇವರಾಜ ಅರಸುರವರ 108ನೇ ಜನ್ಮ ದಿನಾಚರಣೆ

ದಾವಣಗೆರೆ, ಆ.19: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 20ರಂದು ಬೆಳಿಗ್ಗೆ 10.30ಗಂಟೆಗೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ಪರಿವರ್ತನೆಯ ಹರಿಕಾರ ಡಿ. ದೇವರಾಜ ಅರಸುರವರ (D. Devaraj Urs) 108ನೇ ಜನ್ಮ ದಿನಾಚರಣೆ (birthday) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜನ್ ಅವರು ಬೆಳಿಗ್ಗೆ 10.30 ಗಂಟೆಗೆ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು.

davanagere; ವಲಯ ಕಛೇರಿ ಸ್ಥಳಾಂತರ

ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಡಾ.ಜಿ.ಎಂ. ಸಿದ್ದೇಶ್ವರ, ವಿಧಾನಸಭಾ ಸದಸ್ಯರಾದ ಡಾ. ಶಾಮನೂರು ಶಿವಶಂಕರಪ್ಪ, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ಮಹಾನಗರ ಪಾಲಿಕೆ ಮೇಯರ್ ವಿನಾಯಕ ಬಿ.ಹೆಚ್, ವಿಧಾನ ಪರಿಷತ್ ಸದಸ್ಯರಾದ ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್ ಎನ್, ಡಾ. ತೇಜಸ್ವಿನಿಗೌಡ, ಎಸ್.ಎಲ್ ಭೋಜೇಗೌಡ, ವೈ.ಎ. ನಾರಾಯಣಸ್ವಾಮಿ, ಚಿದಾನಂದ. ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಕೆ.ಅಬ್ದುಲ್ ಜಬ್ಬಾರ್, ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್, ಮಹಾನಗರಪಾಲಿಕೆ ಆಯುಕ್ತೆ ರೇಣುಕಾ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಗಾಯಿತ್ರಿ ಕೆ.ಹೆಚ್ ಉಪಸ್ಥಿತರಿರುವರು.

Leave a Reply

Your email address will not be published. Required fields are marked *

error: Content is protected !!