ಬಿಜೆಪಿ ನಮ್ಮನ್ನು ಕಡೆಗಣಿಸಿಲ್ಲ ಸಿದ್ದರಾಮಯ್ಯ ಹೇಳಿಕೆಗೆ ಯಡಿಯೂರಪ್ಪ ತಿರುಗೇಟು

IMG_20211019_180039

ಶಿವಮೊಗ್ಗ : ಬಿಜೆಪಿ ತಮ್ಮನ್ನು ಕಡೆಗಣಿಸಿಲ್ಲ . ಕಣ್ಣೀರು ಹಾಕಿಕೊಂಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ . ಅದು ಸ್ವಯಂ ತೆಗೆದುಕೊಂಡ ನಿರ್ಧಾರ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಿದ್ದರಾಮಯ್ಯ ಅವರ ಹೇಳಿಕೆಗೆ ಕಟುವಾಗಿಪ್ರತಿಕ್ರಿಯಿಸಿದರು.

‘ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಯಾವ ಮುಖಂಡರೂ ಕಡೆಗಣಿಸಿಲ್ಲ . ಯಾರ ಒತ್ತಡವೂ ನನ್ನ ಮೇಲಿಲ್ಲ . ಬಿಜೆಪಿ ಆಂತರಿಕ ವಿಚಾರ , ಪ್ರಧಾನಿ , ಆರ್‌ಎಸ್ಎಸ್ ಕುರಿತು ಹೇಳಿಕೆ ನೀಡುವ ಮೊದಲು ಸಿದ್ದರಾಮಯ್ಯ ನಾಲಿಗೆ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಲಿ . ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ತಕ್ಕಂತೆ ನಡೆದುಕೊಳ್ಳಲಿ . ಇಲ್ಲದಿದ್ದರೆ ಜನರು ತಕ್ಕಪಾಠ ಕಲಿಸುವರು ಎಂದು ಎಚ್ಚರಿಸಿದರು .

ಸಿಂದಗಿ ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವರು . ಅ .20 , 21 ರಂದು ಸಿಂದಗಿ , 22 , 23 ರಂದು ಹಾನಗಲ್‌ನಲ್ಲಿ ಪ್ರಚಾರ ನಡೆಸುವೆ . ಅಗತ್ಯವಿದ್ದರೆ ಹಾನಗಲ್‌ನಲ್ಲಿ ಹೆಚ್ಚುವರಿಯಾಗಿ ಒಂದು ದಿನ ಪ್ರಚಾರ ಕೈಗೊಳ್ಳುವೆ ಎಂದು ವಿವರ ನೀಡಿದರು .

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯಾರಿಗೂ ಅನ್ಯಾಯ ಮಾಡಿ ಅಲ್ಪಸಂಖ್ಯಾತರಿಗೆ ವಂಚನೆ ಮಾಡಿದ ಒಂದು ಉದಾಹರಣೆಯೂ ಇಲ್ಲ . ಪ್ರಾಮಾಣಿಕವಾಗಿ ಕೆಲಸ ಮಾಡಲಾಗಿದೆ . ಅಲ್ಪಸಂಖ್ಯಾತರು ಬೇಸರ ಮಾಡಿಕೊಳ್ಳುವ ಅಗತ್ಯವೇ ಇಲ್ಲ ಎಂದರು .

Leave a Reply

Your email address will not be published. Required fields are marked *

error: Content is protected !!