ಬಿಜೆಪಿ ಚುನಾವಣಾ ತಯಾರಿ; ರಾಜ್ಯದಲ್ಲಿ ನಡ್ಡಾ ಮತ್ತೆ ಸವಾರಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇದೇ ಜನವರಿ 21ರಂದು ಕರ್ನಾಟಕಕ್ಕೆ ಭೇಟಿ ಕೊಡಲಿದ್ದಾರೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರು ತಿಳಿಸಿದ್ದಾರೆ.

ಅಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಕಲ್ಬುರ್ಗಿಗೆ ಆಗಮಿಸುವ ಅವರು ಬಳಿಕ ವಿಜಯಪುರದಲ್ಲಿ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿ ಶ್ರೀ ಸಿದ್ಧೇಶ್ವರ ಮಹಾಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವರು. ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಮಹಾಸ್ವಾಮೀಜಿ ಈ ಸಂದರ್ಭದಲ್ಲಿ ಹಾಜರಿರುವರು. ಮಧ್ಯಾಹ್ನ ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಅಭಿಯಾನವನ್ನು ಉದ್ಘಾಟಿಸುವರು. ಮನೆಮನೆಗೆ ಭೇಟಿ, ಕರಪತ್ರ ವಿತರಣೆ, ಗೋಡೆ ಬರಹ, ಮಿಸ್ಡ್ ಕಾಲ್ ಸದಸ್ಯತ್ವ ಅಭಿಯಾನದಲ್ಲೂ ಭಾಗವಹಿಸುವರು ಎಂದು ಅವರು ತಿಳಿಸಿದ್ದಾರೆ.

ಬಳಿಕ ಸಿಂಧಗಿಗೆ ತೆರಳುವ ಅವರು ಅಲ್ಲಿ ಆರ್.ಡಿ.ಕಾಲೇಜು ಮುಂಭಾಗದ ಚೌಧರಿ ಲೇಔಟ್‍ನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ನಂತರ ಅವರು ಕಲ್ಬುರ್ಗಿಯಿಂದ ದೆಹಲಿಗೆ ಹಿಂತಿರುಗಲಿದ್ದಾರೆ ಎಂದು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!