ಕರ್ನಾಟಕದಲ್ಲಿ ಬಿಜೆಪಿ ಚುನಾವಣಾ ತಯಾರಿ; ರಾಜ್ಯದಲ್ಲಿ ಎರಡು ದಿನ ನಡ್ಡಾ ಸವಾರಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಭರ್ಜರಿ ಕಾರ್ಯತಂತ್ರದಲ್ಲಿ ತೊಡಗಿದೆ. ಪ್ರಧಾನಿ ಮೋದಿ ಮೋಡಿ ಮೂಲಕ ಮತಗಳಿಕೆಗೆ ಕಸರತ್ತು ನಡೆಸುತ್ತಿರುವ ಕಮಲ ಸೈನ್ಯ ಪಕ್ಷದ ರಾಷ್ಟ್ರೀಯ ವರಿಷ್ಠರನ್ನು ಸಾಲು ಸಾಲಾಗಿ ಕರೆಸಿಕೊಳ್ಳಲು ತೀರ್ಮಾನಿಸಿದೆ.

ಈ ನಡುವೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜನವರಿ 5 ಮತ್ತು 6ರಂದು ರಾಜ್ಯ ಪ್ರವಾಸ ಮಾಡಲಿದ್ದಾರೆ. ಮಧ್ಯಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ರಣವ್ಯೂಹ ನಿರ್ಮಿಸುವ ಪ್ರಯತ್ನ ಬಿಜೆಪಿಯದ್ದಾಗಿದ್ದು, ಸಮುದಾಯಗಳ ಮಠಗಳಿಗೆ ಭೇಟಿ, ಸಮುದಾಯಗಳ ಸಮಾವೇಶಗಳನ್ನು ಹಮ್ಮಿಕೊಂಡಿದೆ. ಜೆ.ಪಿ. ನಡ್ಡಾ ಅವರ ಕರ್ನಾಟಕ ಭೇಟಿ ವೇಳೆಯೂ ಈ ರೀತಿ ಹಲವು ಕಾರ್ಯಕ್ರಮಗಳನ್ನು ರಾಜ್ಯ ಬಿಜೆಪಿ ಹಮ್ಮಿಕೊಂಡಿದೆ.

ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಗಳು ಹೀಗಿವೆ:

  • ಜನವರಿ 5ರಂದು ಮಧ್ಯಾಹ್ನ ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆ. ಸಿದ್ಧಗಂಗಾ ಮಠಕ್ಕೆ ಭೇಟಿ.
  • ಸಂಜೆ ಚಿತ್ರದುರ್ಗದಲ್ಲಿ ವೀರ ಮದಕರಿ ನಾಯಕ, ಒನಕೆ ಓಬವ್ವ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ.
  • ಎಸ್‍ಸಿ-ಎಸ್‍ಟಿ-ಒಬಿಸಿ ಕಾರ್ಯಕರ್ತರ ಸಮಾವೇಶ
  • ಶ್ರೀ ಮಾದಾರ ಚೆನ್ನಯ್ಯ ಮಠ, ಸಿರಿಗೆರೆ ಶ್ರೀ ತರಳಬಾಳು ಮಠಕ್ಕೆ ಭೇಟಿ.
  • ದಾವಣಗೆರೆ ವಿಭಾಗದ ಸಂಸದರು, ಶಾಸಕರು, ಎಂಎಲ್‍ಸಿಗಳು ಮತ್ತು ಜಿಲ್ಲಾ ಅಧ್ಯಕ್ಷರ ಸಭೆ.
  • ಜನವರಿ 6ರಂದು ಬೆಳಿಗ್ಗೆ ಹರಿಹರದ ಶ್ರೀ ಪಂಚಮಸಾಲಿ ಮಠ, ಬೆಳ್ಳುಡಿಯ ಶ್ರೀ ಕನಕ ಗುರುಪೀಠ, ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರು ಪೀಠಕ್ಕೆ ಭೇಟಿ
  • ದಾವಣಗೆರೆ ದಕ್ಷಿಣದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ
  • ಸಂಜೆ ತುಮಕೂರು ಜಿಲ್ಲೆ ಸಿರಾದಲ್ಲಿ ಬೃಹತ್ ಸಾರ್ವಜನಿಕ ಸಭೆ.

 

Leave a Reply

Your email address will not be published. Required fields are marked *

error: Content is protected !!