ಲಿಂಗಾಯತರಿಗೆ ಬಿಜೆಪಿ ಮೋಸ ಮಾಡಿಲ್ಲ.! ಸುಳ್ಳು ಹೇಳೋದ್ರಲ್ಲಿ ಕಾಂಗ್ರೆಸ್‌ನ ಎಸ್ ಎಸ್ ನಂಬರ್ ಒನ್ – ಜಿಎಂ ಸಿದ್ದೇಶ್ವರ

ಲಿಂಗಾಯತರಿಗೆ ಬಿಜೆಪಿ ಮೋಸ ಮಾಡಿಲ್ಲ.! ಸುಳ್ಳು ಹೇಳೋದ್ರಲ್ಲಿ ಕಾಂಗ್ರೆಸ್‌ನ ಎಸ್ ಎಸ್ ನಂಬರ್ ಒನ್ - ಜಿಎಂ ಸಿದ್ದೇಶ್ವರ

ದಾವಣಗೆರೆ: ಸುಳ್ಳು ಹೇಳೋದ್ರಲ್ಲಿ ಕಾಂಗ್ರೆಸ್ ನಂಬರ್ ಒನ್ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಟೀಕಿಸಿದ್ದಾರೆ.

ನಗರದಲ್ಲಿಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಸುಳ್ಳು ಹೇಳುವುದೇ ಒಂದು ಕೆಲಸ ಎಂದರು.

ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಜೈಲಿಗೆ ಹೋಗಲು ನಾನು ಕಾರಣ ಎಂಬ ಶಿವಶಂಕರಪ್ಪ ಆರೋಪಿಸಿದ್ದರು. ಈಗ ಮತ್ತೆ ಅದನ್ನೇ ಹೇಳುತ್ತಿದ್ದಾರೆ ಎಂದರು.

ಬಿಜೆಪಿಯಲ್ಲಿ ಲಿಂಗಾಯತರಿಗೆ ಯಾವ ಮೋಸವನ್ನೂ ಮಾಡಿಲ್ಲ ಎಂದು ಹೇಳಿದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಲಕ್ಷಣ ಸವದಿ ಬಿಜೆಪಿ ಬಿಟ್ಟಿದ್ದಾರೆ. ಪಕ್ಷದಲ್ಲಿ ಇನ್ನು ಲಿಂಗಾಯತ ಸಮುದಾಯದ ನಾಯಕರಿದ್ದಾರೆ. ಯಾವುದೇ ಸಮಸ್ಯೆ ಇಲ್ಲ. ಏನಿದ್ದರೂ ಪಕ್ಷದ ವರಿಷ್ಠರು ಕ್ರಮ ಕೈಗೊಳ್ಳುತ್ತಾರೆ. ನನ್ನದೇನಿದ್ದರೂ ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿ ಅಷ್ಟೇ ಎಂದು ಹೇಳಿದರು.

ಹರಪನಹಳ್ಳಿ ವಿಧಾನಸಭಾ ಕ್ಷೇತ್ರವೂ ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೆ. ಅದೂ ಸೇರಿ ದಾವಣಗೆರೆ ವ್ಯಾಪ್ತಿಯ ಎಂಟು ಕಡೆಗಳಲ್ಲಿಯೂ ಕಮಲ ಅರಳುವ ಭರವಸೆ ಇದೆ. ಎಲ್ಲೆಡೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಯಕೊಂಡ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯಗಾರರ ಜೊತೆ ನಾನು ಮಾತನಾಡಿದ್ದೇನೆ. ನಾಳೆ ಕೇಂದ್ರ ಆರೋಗ್ಯ ಸಚಿವರು ಆಗಮಿಸುತ್ತಿದ್ದು ಎಲ್ಲರ ಜೊತೆ ಮತ್ತೊಮ್ಮೆ ಮಾತುಕತೆ ನಡೆಸಲಾಗುವುದು. ಎಲ್ಲರೂ ಬಿಜೆಪಿ ಕಾರ್ಯಕರ್ತರೇ. ಹಾಗಾಗಿ ಬಂಡಾಯ ಶಮನ ಆಗುತ್ತದೆ. ಒಂದೆರಡು ದಿನಗಳಲ್ಲಿ ಎಲ್ಲವೂ ಸರಿಹೋಗಲಿದೆ ಎಂದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!