bjp; ಬಿಜೆಪಿ ಬಿಟ್ಟು ನಾನು ಹೋಗೋದಿಲ್ಲ, ಲೋಕಸಭೆಗೆ ಆಕಾಂಕ್ಷಿ

ಹೊನ್ನಾಳಿ, ಆ.26: ನಾನು ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿದ್ದೇನೆ ಅಂದ್ರೆ ಕಾಂಗ್ರೆಸ್ ಸೇರುತ್ತೇನೆ ಎಂಬುದಲ್ಲ, ನಾನು ಕಾಂಗ್ರೆಸ್ ಸೇರೋದಿಲ್ಲ ಎಂದು ಮಾಜಿ ಶಾಸಕ  ಎಂ.ಪಿ ರೇಣುಕಾಚಾರ್ಯ (MP Renukacharya) ಹೇಳಿದರು.

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿ, ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಚರ್ಚೆಯಲ್ಲಿದ್ದ ಕಾರಣ ಅವರು ಈ ಸ್ಪಷ್ಟನೆ ನೀಡಿದರು.

ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಮಧ್ಯಾಹ್ನ ಭೇಟಿಮಾಡಿದ ರೇಣುಕಾಚಾರ್ಯ, 20 ನಿಮಿಷ ಚರ್ಚೆ ನಡೆಸಿದ್ದರು. ನಂತರ ಶಿವಕುಮಾರ್‌ ಅವರನ್ನೂ ಭೇಟಿಮಾಡಿ ಮಾತುಕತೆ ನಡೆಸಿದ್ದು ರಾಜಕೀಯ ಪಡಸಾಲೆಯಲ್ಲಿ ನಾನಾ ಮಾತುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಮಾಜಿ ಶಾಸಕರು ಸ್ಪಷನೆ ನೀಡಿದ್ದಾರೆ.

Exclusive Breaking; congress; ಕಾಂಗ್ರೆಸ್ ಸೇರ್ತಾರಾ ಎಂ.ಪಿ ರೇಣುಕಾಚಾರ್ಯ?

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಸೌಹಾರ್ಧಯುತವಾಗಿ ಮಾತ್ರ ನಾನು ಭೇಟಿಮಾಡಿ, ಮಾತುಕತೆ ನಡೆಸಿದ್ದೇನೆ ಅಷ್ಚೆ ಎಂದರು.

ಹೊನ್ನಾಳಿ ನ್ಯಾಮತಿ ಅವಳಿ ತಾಲೂಕನ್ನು ಬರಪಟ್ಟಿಗೆ ಸೇರಿಸುವಂತೆ ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿ ಮಾಡಿದ್ದೇನೆ. ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ. ಅದೇ ರೀತಿಯಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ಭೇಟಿ ಮಾಡಿದ್ದೇನೆ. ಈ ನಾಯಕರ ಭೇಟಿ ಉದ್ದೇಶ ಹೊನ್ನಾಳಿ – ನ್ಯಾಮತಿ ಅವಳಿ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡುವಂತೆ ಒತ್ತಾಯಿಸಲು. ಈ ವಿಚಾರ ಬಿಟ್ಟು ಬೇರೆ ವಿಚಾರ ಮಾತನಾಡಿಲ್ಲ. ನಾನು ಕಾಂಗ್ರೆಸ್ ಸೇರಲ್ಲ, ಈ ಬಗ್ಗೆ ಆಸಕ್ತಿಯೂ ಇಲ್ಲ ಎಂದು ಎಂ. ಪಿ. ರೇಣುಕಾಚಾರ್ಯ ತಿಳಿಸಿದರು.

media; 27ರಂದು ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮಾಧ್ಯಮ ದಿನಾಚರಣೆ

ಮುಂಬರುವ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿಯ ಪ್ರಬಲ ಆಕ್ಷಾಂಕ್ಷಿ ಎಂದು‌ ನಾನು ಹೇಳಿದ್ದೇನೆ. ನನಗೆ ಲೋಕಸಭೆಗೆ ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸ ಇದೆ. ಹಲವು ವರ್ಷಗಳಿಂದ ಬಿಜೆಪಿಯಲ್ಲಿ ದುಡಿದಿದ್ದೇನೆ. ಶಾಸಕನಾಗಿ, ಸಚಿವನಾಗಿ ಕೆಲಸ ಮಾಡಿದ ಅನುಭವವಿದೆ. ವಿಶ್ವ ಮೆಚ್ಚಿದ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರ 9 ವರ್ಷಗಳ ಕ್ರಾಂತಿಕಾರಕ ಅಭಿವೃದ್ಧಿ ಕಾರ್ಯಗಳು ಎಲ್ಲರ ಮೆಚ್ಚುಗೆಗೆ ವ್ಯಕ್ತವಾಗಿದೆ. ಬೇರೆಯವರಿಗೆ ಬಿಜೆಪಿ ಟಿಕೆಟ್ ಕೊಟ್ಟರೂ ಗೆಲುವಿಗೆ ಶ್ರಮಿಸುತ್ತೇನೆ ಎಂದು ಎಂ. ಪಿ. ರೇಣುಕಾಚಾರ್ಯ ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿನ ಸೋಲಿನ ಬಳಿಕ ಬಿಜೆಪಿಯ ಕೆಲವು ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆಯನ್ನೂ ಮಾಜಿ ಶಾಸಕರು ನೀಡಿದ್ದರು. ಆಗ ಪಕ್ಷದ ಶಿಸ್ತು ಸಮಿತಿಯಿಂದ ಅವರಿಗೆ ನೋಟಿಸ್‌ ಜಾರಿ ಮಾಡಲಾಗಿದ್ದು, ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಪರ ಬ್ಯಾಟಿಂಗ್ ಬೀಸಿದ್ದನ್ನು ಸ್ಮರಿಸಬಹುದು.

Leave a Reply

Your email address will not be published. Required fields are marked *

error: Content is protected !!