ಬಿಜೆಪಿ ಕಾರ್ಯಕರ್ತೆ ಟಿ.ಓ.ಚಂದ್ರಕಲಾ ಅವರನ್ನು ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ – ಕರುನಾಡು ಹಿತರಕ್ಷಣಾ ಸಮಿತಿ ಒತ್ತಾಯ

ದಾವಣಗೆರೆ: ಕಳೆದ ಹದಿನೆಂಟು ವರ್ಷಗಳಿಂದ ಭಾರತೀಯ ಜನತಾ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿರುವ ಟಿ.ಓ.ಚಂದ್ರಕಲಾ ಅವರನ್ನು ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಒತ್ತಾಯಿಸಿ ಕರುನಾಡು ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳು ಉಪ ವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಗ್ರಾಮದ ಟಿ.ಓ.ಚಂದ್ರಕಲಾ ವೆಂಕಟರಮಣಯ್ಯ ಅವರು ಈಗಾಗಲೇ ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ಪರಿಷತ್‌ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿ ಕಳೆದ 18 ವರ್ಷಗಳಿಂದ ಪಕ್ಷ ಸಂಘಟನೆ ಮಾಡುವಲ್ಲಿ ಶ್ರಮವಹಿಸಿದ್ದಾರೆ.

ಆದ್ದರಿಂದ ಅವರ ಸೇವೆ ಗುರುತಿಸಿ ಅವರಿಗೆ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ‌ ನೀಡಬೇಕೆಂದು ಇದೇ ವೇಳೆ
ಸಮಿತಿಯ ಜಿಲ್ಲಾಧ್ಯಕ್ಷ ಎಂ.ನಾಗರಾಜನಾಯ್ಕ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಕೆ. ಪಾರ್ವತಿಬಾಯಿ, ರೂಪಾ, ಚೆನ್ನಕೇಶವ, ಪ್ರೇಮ, ಸಾವಿತ್ರ, ಸೌಮ್ಯ ಮತ್ತಿತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!