ಬಿಜೆಪಿ ಮುಖಂಡ ನೀರಿಗೆ ಬಿದ್ದು ಸಾವು

ಸುಳ್ಯ: ಬಿಜೆಪಿ ಮುಖಂಡನೊಬ್ಬ ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಸುಳ್ಳ ಜಿ.ಪಂ. ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ಹೊಳೆ ನೀರಿಗೆ ಬಿದ್ದು ಗುರುವಾರ ಮೃತಪಟ್ಟಿದ್ದಾರೆ.
ತುದಿಯಡ್ಕ ಬಳಿ ಪಯಸ್ವಿನಿ ನದಿಗೆ ತನ್ನ ತೋಟಕ್ಕೆ ನೀರು ಹರಿಸಲು ಪಂಪ್‌ನ ಪುಟ್ ವಾಲ್ವ್ ದುರಸ್ತಿ ಸಲುವಾಗಿ ಅವರು ನೀರಿಗೆ ಇಳಿದಿದ್ದರು. ಈ ಸಂದರ್ಭ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಮೃತದೇಹವನ್ನು ಮೇಲೆತ್ತಲಾಗಿದೆ. ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಸಂದರ್ಭದಲ್ಲಿ ತನ್ನ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದ ನವೀನ್ ಕುಮಾರ್ ರೈ ಮೇನಾಲ ಬಿಜೆಪಿಯ ಪ್ರಭಾವೀ ಮುಖಂಡರಾಗಿದ್ದರು. ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು.