Bjp meeting: ಸೆಪ್ಟೆಂಬರ್18 – 19 ರಂದು ಬೆಣ್ಣೆ ನಗರಿಯಲ್ಲಿ ಕಮಲದ ಕಲರವ:71 ಗಣ್ಯ ವಕ್ತಿಗಳಿಗೆ ಪೂರ್ಣ ಕುಂಬ ಸ್ವಾಗತ.! ಯಾಕೆ ಗೊತ್ತಾ.?
ದಾವಣಗೆರೆ: ಮಧ್ಯ ಕರ್ನಾಟಕ ದಾವಣಗೆರೆ ನಗರದಲ್ಲಿ ಸೆ.18 ಹಾಗೂ 19 ರಂದು ರಾಜ್ಯ ಬಿಜೆಪಿ ಕರ‍್ಯಕಾರಿಣಿ ಸಭೆ ನಡೆಯಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ ತಿಳಿಸಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೆ.18 ರಂದು ಇಲ್ಲಿನ ಅಪೂರ್ವ ರೆಸಾರ್ಟ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಪಕ್ಷದ ಉಪಾಧ್ಯಕ್ಷರು, ಪ್ರಧಾನ ಕಾರ‍್ಯದರ್ಶಿಗಳು ಭಾಗವಹಿಸಲಿದ್ದಾರೆ ಎಂದರು.
ಸೆ.19 ರಂದು ನಗರದ ತ್ರಿಶೂಲ್ ಕಲಾ ಭವನದಲ್ಲಿ ನಡೆಯುವ ರಾಜ್ಯ ಬಿಜೆಪಿ ಕಾರ‍್ಯಕಾರಿಣಿ ಸಭೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಷ್ಟೀಯ ಪ್ರಧಾನ ಕಾರ‍್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ರಾಜ್ಯದ ಎಲ್ಲಾ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು, ಪಕ್ಷದ ಜಿಲ್ಲಾಧ್ಯಕ್ಷರುಗಳು, ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನು ಸಮರ್ಪಕವಾಗಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಬಗ್ಗೆ ಮತ್ತು ಪಕ್ಷದ ಬಲವರ್ಧನೆಯ ಕುರಿತು ರಾಜ್ಯ ಬಿಜೆಪಿ ಕಾರ‍್ಯಕಾರಿಣಿ ಸಭೆಯಲ್ಲಿ ಚರ್ಚೆಯಾಗಲಿದೆ. ನಳೀನ್ ಕುಮಾರ್ ಕಟೀಲ್ ಅವರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಲಂಕರಿಸದ ಮೇಲೆ ಮೊದಲ ಬಾರಿಗೆ ರಾಜ್ಯ ಕಾರ್ಯಕಾರಿಣಿ ನಡೆಸಲಾಗುತ್ತಿದ್ದು, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿ ಹೊರ ಹೊಮ್ಮುವುದರಲ್ಲಿ ಸಂದೇಹವಿಲ್ಲ ಎಂದರು.
ಕೋವಿಡ್‌ನ ಕಾರಣಕ್ಕಾಗಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಮುಂದೂಡುತ್ತಾ ಬರಲಾಗಿತ್ತು. ಈಗ ಕರೋನಾ ಸೋಂಕಿನ ಪ್ರಮಾಣ ಇಳಿಮುಖವಾಗಿರುವ ಕಾರಣ ಸಭೆ ಹಮ್ಮಿಕೊಳ್ಳಲಾಗಿದ್ದು, ಸುಮಾರು 50 ಕಿಮೀ ವರೆಗೂ ಪಕ್ಷದ ಬ್ಯಾನರ್, ಫ್ಲೆಕ್ಸ್, ದೀಪಾಲಂಕಾರಗಳು ಕಂಗೊಳಿಸುತ್ತವೆ. ಅಲ್ಲದೇ, ಇದೇ ಸೆ.17ರಂದು ಪ್ರಧಾನಿ ಮೋದಿ ಅವರಿಗೆ 71 ನೇ ವರ್ಷದ ಹುಟ್ಟು ಹಬ್ಬವಿರುವ ಕಾರಣ ಸಭೆಯಲ್ಲಿ ಪಾಲ್ಗೊಳ್ಳುವ ಗಣ್ಯವ್ಯಕ್ತಿಗಳನ್ನು 71 ಪೂರ್ಣ ಕುಂಭಗಳಿಂದ ಸ್ವಾಗತ ಮಾಡಲಾಗುವುದು ಎಂದು ತಿಳಿಸಿದರು.
ಈ ರಾಜ್ಯಕಾರ್ಯಕಾರಿಣಿ ಸಭೆಯು ಮುಂಭರುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಒಂದು ಮೈಲಿಗಲ್ಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಪದಾಧಿಕಾರಿಗಳಾದ ಡಿ.ಎಸ್. ಶಿವಶಂಕರ್, ಡಿ.ಎಸ್. ಜಗದೀಶ್, ಶ್ರೀನಿವಾಸ್ ದಆಸಕರಿಯಪ್ಪ, ದೂಡಾ ಅಧ್ಯಕ್ಷ ದೇವರಮನೆ ಶಿವಕುಮಾರ್, ಸೊಕ್ಕೆ ನಾಗರಾಜ್, ಬಾತಿ ವೀರೇಶ್, ಗೋಪಾಲ್‌ರಾವ್ ಮಾನೆ, ಹನುಮಂತಯ್ಯ, ಬಸವರಾಜ್, ಗುರು ಸೋಗಿ, ವಿಶ್ವಾಸ್ ಹೆಚ್.ಪಿ ಉಪಸ್ಥಿತರಿದ್ದರು.