ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ : ರೋಡ್ ಶೋ ನಡೆಸಲಿರುವ ಮೋದಿ
ನವದೆಹಲಿ: ಮಿಷನ್ 2024 ರ ಕಾರ್ಯತಂತ್ರವನ್ನು ಸಿದ್ಧಪಡಿಸಲು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಎರಡು ದಿನಗಳ ಸಭೆ ದೆಹಲಿಯಲ್ಲಿ ಇಂದಿನಿಂದ ಪ್ರಾರಂಭವಾಗುತ್ತಿದೆ. ಈ ಸಭೆಗೂ ಮುನ್ನ ಪ್ರಧಾನಿ ಮೋದಿ ದೊಡ್ಡ ರೋಡ್ ಶೋ ನಡೆಸಲಿದ್ದಾರೆ. ಈ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ಪ್ರಸ್ತಾಪವನ್ನೂ ಮಾಡಬಹುದು.
ದೆಹಲಿಯಲ್ಲಿ ಇಂದಿನಿಂದ ಆರಂಭವಾಗಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ದೇಶಾದ್ಯಂತ ಬಿಜೆಪಿಯ ಸುಮಾರು 350 ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ರೋಡ್ ಶೋ ನಡೆಸಲಿದ್ದು, ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಈ ರೋಡ್ ಶೋ ಪಟೇಲ್ ಚೌಕ್‌ನಿಂದ ಎನ್‌ಡಿಎಂಸಿ ಕಟ್ಟಡದವರೆಗೆ ನಡೆಯಲಿದೆ. ಬಿಜೆಪಿ ಮೂಲಗಳ ಪ್ರಕಾರ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ನಡೆಯಲಿದೆ. ಪಟೇಲ್ ಚೌಕ್‌ನಿಂದ ಎನ್‌ಡಿಎಂಸಿ ಕಟ್ಟಡದವರೆಗೆ ಸುಮಾರು ಒಂದು ಕಿಲೋಮೀಟರ್ ರೋಡ್ ಶೋ ನಡೆಯಲಿದೆ.
ಸೋಮವಾರ ಬೆಳಗ್ಗೆ 9 ಗಂಟೆಗೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ದೇಶಾದ್ಯಂತದ ಪದಾಧಿಕಾರಿಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗಿಯಾಗಲಿದ್ದಾರೆ. ಸಂಜೆ 4 ಗಂಟೆಗೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭವಾಗಲಿದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉದ್ಘಾಟನಾ ಭಾಷಣ ಮಾಡಲಿದ್ದಾರೆ. ಈ ಸಭೆಯಲ್ಲಿ ದೇಶದ ಎಲ್ಲಾ ರಾಜ್ಯಗಳ ರಾಜ್ಯಾಧ್ಯಕ್ಷರು ಸೇರಿದಂತೆ ಸಂಘಟನೆಯ ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಅವಧಿ ಇದೇ ತಿಂಗಳಿಗೆ ಮುಕ್ತಾಯವಾಗಲಿದೆ. ಈ ಸಭೆಯಲ್ಲಿ ಜೆಪಿ ನಡ್ಡಾ ಅವರ ಅಧಿಕಾರಾವಧಿ ವಿಸ್ತರಣೆಗೂ ಒಪ್ಪಿಗೆ ಸಿಗಬಹುದು. 2023ರಲ್ಲಿ ನಡೆಯಲಿರುವ ಒಂಬತ್ತು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಸಂಘಟನೆಯನ್ನು ಹೇಗೆ ಸಕ್ರಿಯಗೊಳಿಸಬೇಕು ಎಂಬ ಬಗ್ಗೆಯೂ ಚರ್ಚೆ ನಡೆಯಲಿದೆ. ಗುಜರಾತ್‌ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ನಂತರ ಬಿಜೆಪಿಯ ಮೊದಲ ಸಭೆ ಇದಾಗಿದೆ.