ಬಿಜೆಪಿಯಿಂದ ರಾಜ್ಯಸಭೆಗೆ ಸುಧಾಮೂರ್ತಿ ನಾಮನಿರ್ದೇಶನ

ನವದೆಹಲಿ: ಕೇಂದ್ರ ಸರ್ಕಾರ ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ಮಹಿಳಾ ದಿನಾಚರಣೆಯಂದೇ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.

ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಹಾಗೂ ಇನ್ಫೋಸಿಸ್‌ ಫೌಂಡೇಷನ್‌ನ ಮಾಜಿ ಅಧ್ಯಕ್ಷ, ಸಮಾಜಸೇವಕಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಬಿಜೆಪಿ ಪಕ್ಷದಿಂದ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ.ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದು, ‘ಭಾರತದ ರಾಷ್ಟ್ರಪತಿಗಳು ಶ್ರೀಮತಿ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಜಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ, ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಹಾರೈಸುತ್ತೇನೆ’ ಎಂದು ಮೋದಿ ಬರೆದಿದ್ದಾರೆ.

ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಉದಾಹರಣೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಹಾರೈಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!