ತೀರ್ಥಹಳ್ಳಿಯಲ್ಲಿ ರೈತ ಸಮಾವೇಶ, ವಿಜಯ ಸಂಕಲ್ಪ ಯಾತ್ರೆ ಮೂಲಕ ಬಿಜೆಪಿ ಶಕ್ತಿ ಪ್ರದರ್ಶನ

BJP power show through Farmers Conference, Vijaya Sankalpa Yatra in Tirthahalli

ತೀರ್ಥಹಳ್ಳಿಯಲ್ಲಿ ರೈತ ಸಮಾವೇಶ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ರೈತ ಸಮಾವೇಶ, ವಿಜಯ ಸಂಕಲ್ಪ ಯಾತ್ರೆ ಮೂಲಕ ಬಿಜೆಪಿ ಶಕ್ತಿ ಪ್ರದರ್ಶನ ನಡೆಯಿತು. ಬುಧವಾರ ತೀರ್ಥಹಳ್ಳಿಯ ಬಾಳೆಬೈಲಿನಲ್ಲಿ ನಡೆದ ಜಿಲ್ಲಾ ಮಟ್ಟದ ರೈತ ಸಮಾವೇಶದಲ್ಲಿ ಸಹಸ್ರಾರು ರೈತರು, ಕಾರ್ಯಕರ್ತರು ಭಾಗವಹಿಸಿದ್ದರು.
ಗೃಹಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಶಾಸಕ ಸ್ವಾಮಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಸಂಸದ ಬಿ ವೈ ರಾಘವೇಂದ್ರ ಸೇರಿದಂತೆ ಅನೇಕ ಗಣ್ಯರು, ಭಾವಹಿಸಿ ಬಿಜೆಪಿ ಕಾರ್ಯಕರ್ತರಿಗೆ ಸ್ಫೂರ್ತಿಯಾದರು. ಇದೇ ವೇಳೆ, ವಿವಿಧ ಪಕ್ಷಗಳ ಕಾರ್ಯಕರ್ತರು ಆರಗ ಜ್ಞಾನೇಂದ್ರರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.


ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸಾಲೆಕೊಪ್ಪ ರಾಮಚಂದ್ರರವರ ಅಧ್ಯಕ್ಷತೆಯಲ್ಲಿ ನಡೆದ ಸಮಾವೇಶದಲ್ಲಿ ಮಂಡಲ ಅಧ್ಯಕ್ಷ ಬಾಳೆಬೈಲು ರಾಘವೇಂದ್ರ, ಮಂಡಲ ರೈತ ಮೋರ್ಚಾ ಅಧ್ಯಕ್ಷ ರವೀಂದ್ರ ಹೊಳೆಕೊಪ್ಪ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.


ಬೃಹತ್ ರೈತ ಸಮಾವೇಶದ ನಂತರ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಕ್ಷೇತ್ರದ, ವಿವಿಧೆಡೆಯಿಂದ ಆಗಮಿಸಿದ ಸಾವಿರಾರು ಕಾರ್ಯಕರ್ತರು ಭಾಗವಹಿಸಿದರು. ಪಟ್ಟಣದಾದ್ಯಂತ ಸಾಗಿದ ಯಾತ್ರೆಯಲ್ಲಿ ಕಾರ್ಯಕರ್ತರು ಹೂವಿನ ಮಳೆಗೈದರು.


ವಿಜೃಂಭಣೆಯಿಂದ ಜರುಗಿದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಕ್ಷದ ಧ್ವಜಗಳು, ಬ್ಯಾನರ್ ಗಳು, ಬಂಟಿಂಗ್ಸ್ ರಾರಾಜಿಸುತ್ತಿದ್ದವು. ಯುವಕರನ್ನು ಹುರಿದುಂಬಿಸಿ ಕುಣಿಸಿದ ಬಿಜೆಪಿ ಥೀಮ್ ಸಾಂಗ್ಸ್, ಧ್ವನಿವರ್ಧಕಗಳ ಅಬ್ಬರ, ಡೋಲು, ನಗಾರಿಯ ಭೇರಿ ಮೈಮನ ನವಿರೇಳಿಸಿತು.’ ಈ ಬಾರಿ ಆರಗ, ಬೇರೆ ಇಲ್ಲ ಮಾರ್ಗ’ ಎಂಬ ಕಾರ್ಯಕರ್ತರ ಜಯಘೋಷ ಮೊಳಗುತ್ತಿತ್ತು.

Leave a Reply

Your email address will not be published. Required fields are marked *

error: Content is protected !!