ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ
ಮಂಡ್ಯ :ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಗರದ ಸಂಜಯ ಸರ್ಕಲ್ ನಲ್ಲಿ ಪ್ರತಿಭಟನೆ. ಮಾಜಿ ಮುಖ್ಯಮಂತ್ರಿ ಸಿದ್ದರಮಯ್ಯ ಅವರ ಹೇಳಿಕೆ ಖಂಡಿಸಿ ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು.
ಮುಖ್ಯ ಮಂತ್ರಿ ಬಸವರಾಜ್ ಬೋಮ್ಮಾಯಿ ವಿರುದ್ಧ ನಾಯಿ ಮರಿ ಎಂಬ ಅವಹೇಳನಕಾರಿ ಪದ ಬಳಸಿದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉತ್ತರ ಪ್ರದೇಶ ಮುಖ್ಯ ಮಂತ್ರಿ ಯೋಗಿ ಅದಿತ್ಯನಾಥ್ ವಿರುದ್ಧ ಮಾತನಾಡಿ ಅವರ ತೇಜೋವಧೆ ಮಾಡಿದಂತಹ ಜೆಡಿಎಸ್ ರಾಜ್ಯ ಅದ್ಯಕ್ಷರಾದ, ಸಿಎಂ ಇಬ್ರಾಹಿಂ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಮುಖಂಡರು ಅವರಿಬ್ಬರ ಪ್ರತಿಕೃತಿಯನ್ನು ದಹಿಸಿ ಘೋಷಣೆ ಕೂಗಿದರು.
ಇನ್ನು ಪ್ರತಿಭಟನೆಯಲ್ಲಿ ಬಿಜೆಪಿ ವಕ್ತಾರ ಸಿ ಟಿ ಮಂಜು ಅಶೋಕ್ ಜಯರಾಮ್ ಚಂದಗಾಲು ಶಿವಣ್ಣ ಬೇಕ್ ಪಾಯಿಂಟ್ ಅರವಿಂದ ಹೋಡಗಟ್ಟ ಮುಂತಾದ ಬಿಜೆಪಿ ಕಾರ್ಯಕರ್ತರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.