raitha morcha; ಭತ್ತದ ಬೆಳೆ ಹಾನಿ ಹೊಲಗಳಿಗೆ ಬಿಜೆಪಿ ರೈತ ಮೋರ್ಚಾ ತಂಡ ಭೇಟಿ

ದಾವಣಗೆರೆ, ನ.10: ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನೆಲಕಚ್ಚಿದ ಭತ್ತದ  ಹೊಲಗಳಿಗೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ (raitha morcha) ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಲೋಕಿಕೆರೆ ನಾಗರಾಜ್ ರವರು ಭದ್ರಾ ಅಚ್ಚುಕಟ್ಟು ಪ್ರದೇಶದ ಕೊನೆ ಭಾಗದ ರೈತರು ಬಹಳ ಕಷ್ಟ ಪಟ್ಟು ಜಮೀನುಗಳಿಗೆ ನೀರುಣಿಸಿ ಭತ್ತ ಬೆಳೆದಿದ್ದಾರೆ. ಆದರೆ ಈಗ ಸುರಿದಿರುವ ಮಳೆಯಿಂದ ಗಾಳಿಯ ರಭಸಕ್ಕೆ ಭತ್ತದ ಬೆಳೆ ಉರುಳಿ ನೆಲಕ್ಕೆ ಬಿದ್ದಿದೆ. ನೋಡಲು ಚಾಪೆ ಹಾಸಿದಂತೆ ಹಾಸಿದೆ. ಇದರಿಂದ ಬಹಳಷ್ಟು ಬೆಳೆ ಹಾನಿಯಾಗಿ ರೈತರು ನಷ್ಟ ಅನುಭವಿಸುವಂತಾಗಿದೆ. ಸರ್ಕಾರ ತಕ್ಷಣ ಬೆಳೆ ಹಾನಿ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

siddaramaiah; ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು: ಸಿದ್ದರಾಮಯ್ಯ

ಮಾಜಿ ಎಪಿಎಂಸಿ ಅಧ್ಯಕ್ಷ, ಬಿಜೆಪಿ ಮುಖಂಡ ಕೊಳೇನಹಳ್ಳಿ ಬಿ ಎಂ ಸತೀಶ್ ರವರು ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ಇದೆ. ತಾಲ್ಲೂಕು ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ವಿಪತ್ತು ನಿರ್ವಹಣೆ ಕಾರ್ಯಪಡೆ ಇದೆ. ಇವರೆಡು ಸಮಿತಿಗಳಲ್ಲಿ ಕಂದಾಯ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಇದ್ದಾರೆ. ಆದರೆ ಇಂತಹ ಅನಾವೃಷ್ಟಿ ಮತ್ತು ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿ ಸಮೀಕ್ಷೆ ನಡೆಸಿಲ್ಲ. ತಕ್ಷಣ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸೂಕ್ತ ಪರಿಹಾರ ನೀಡಿ, ಬೆಳೆ ಹಾನಿಯಿಂದ ಸಂಕಷ್ಟಕ್ಕೀಡಾದ ರೈತರ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸಿದರು.

ರೈತ ಮುಖಂಡ ಧನಂಜಯ ಕಡ್ಲೆಬಾಳ್ ರವರು ಮಾತನಾಡಿ, ಭದ್ರಾ ಅಚ್ಚುಕಟ್ಟು ಪ್ರದೇಶದ ಕೊನೆ ಭಾಗದ ಕಡ್ಲೆಬಾಳ್, ಅರಸಾಪುರ, ಕಕ್ಕರಗೊಳ್ಳ, ಕೋಡಿಹಳ್ಳಿ, ಅವರಗೊಳ್ಳ ಮುಂತಾದ ಗ್ರಾಮಗಳ ರೈತರಿಗೆ ಭತ್ತದ ಬೆಳೆಯೇ ಜೀವನಾಡಿಯಾಗಿದೆ. ಸರ್ಕಾರ ಆವರ್ತ ನಿಧಿಯಲ್ಲಿರುವ ಅನುದಾನ ಬಿಡುಗಡೆ ಮಾಡಿ ಬೆಳೆ ಹಾನಿಯಿಂದ ನಷ್ಟಕ್ಕೀಡಾದ ರೈತರಿಗೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿರೇಶ್ ದೊಗ್ಗಳ್ಳಿ, ಕಕ್ಕರಗೊಳ್ಳದ ಕಲ್ಲಿಂಗಪ್ಪ, ಕಡ್ಲೆಬಾಳ್ ಬಸವರಾಜು ಹಳ್ಳಿಕೇರಿ, ಕಲ್ಪನಹಳ್ಳಿ ರೇವಣಸಿದ್ದಪ್ಪ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!