ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸೆಪ್ಟೆಂಬರ್ 18 & 19 ರಂದು ದಾವಣಗೆರೆಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ
ದಾವಣಗೆರೆ: ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯು ದಾವಣಗೆರೆಯಲ್ಲಿ ಇದೇ ಸೆ.18 ಮತ್ತು 19 ರಂದು ನಡೆಯಲಿದೆ.
ಸೆ. 18ರಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಅಂದು ಕಾರ್ಯಕಾರಿಣಿಯಲ್ಲಿ ನಡೆಸಬೇಕಾದ ನಿರ್ಣಯಗಳ ಕುರಿತಂತೆ ಚರ್ಚೆ ನಡೆಸಲಾಗುತ್ತದೆ ಎಂದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಹೇಳಿದ್ದಾರೆ.
ಸೆ. 19ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಗರದ ತ್ರಿಶೂಲ್ ಕಲಾಭವನದಲ್ಲಿ ನಡೆಯಲಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಸೇರಿದಂತೆ ರಾಜ್ಯದ ಎಲ್ಲಾ ಸಂಸದರು, ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದರು.
ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದಲ್ಲಿ ಪಕ್ಷವು
ಎಲ್ಲೆಲ್ಲಿ ಅಶಕ್ತವಾಗಿದೆಯೊ ಅಲ್ಲಿ ಪಕ್ಷದ ಶಕ್ತಿವರ್ಧನೆಗೆ ಪ್ರಾಮುಖ್ಯತೆ ನೀಡಿ ಪಕ್ಷವನ್ನು ಸದೃಢ ಗೊಳಿಸಲಾಗುವುದು ಎಂದರು.