140ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಬಿಜೆಪಿ ಮತ್ತೆ ಅಧಿಕಾರಕ್ಕೆ; ನಳಿನ್ ವಿಶ್ವಾಸ.

140ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಬಿಜೆಪಿ ಮತ್ತೆ ಅಧಿಕಾರಕ್ಕೆ; ನಳಿನ್ ವಿಶ್ವಾಸ.

ಬೆಂಗಳೂರು : ರಾಜ್ಯ ಅಬಕಾರಿ ಸಚಿವ ಕೆ. ಗೋಪಾಲಯ್ಯನವರು ಇಂದು, ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ವೃಷಭಾವತಿನಗರ ಹಾಗೂ ಕಾಮಾಕ್ಷಿಪಾಳ್ಯದಲ್ಲಿ ಚುನಾವಣಾ ಪ್ರಚಾರ ಮಾಡಿದರು. ಬಿಜೆಪಿ ರಾಜ್ಯಾಧ್ಯಾಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಕ್ಷೇತ್ರದ ಕಾರ್ಯಕರ್ತರು ಸಾಥ್ ನೀಡಿದರು.
ಮನೆ ಮನೆಗೆ ತೆರಳಿ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ತಿಳಿಸಿ ಮತಯಾಚನೆ ಮಾಡಿದರು. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಜಯಗಳಿಸಿ, ಸರ್ಕಾರವನ್ನು ನಾವೇ ರಚನೆ ಮಾಡಲಿದ್ದೇವೆ. ನನ್ನ ಮತದಾರರು ನನ್ನ ಪರವಾಗಿ ಇದ್ದಾರೆ. ಈ ಬಾರಿ ಕೇತ್ರದಲ್ಲಿ ಬಹುಮತದಿಂದ ಗೆದ್ದು ಬರುತ್ತೇನೆ ಎಂದು ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ. ನರೇಂದ್ರಬಾಬು, ಪಕ್ಷದ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!