ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ಬೇಷರತ್ ಕ್ಷಮೆಯಾಚಿಸಲು ಕಾಂಗ್ರೆಸ್ ಒತ್ತಾಯ

ದಾವಣಗೆರೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೂಡಲೇ ಹೇಳಿಕೆ ಹಿಂಪಡೆದು, ಬೆಷರತ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ಉತ್ತರ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕಟೀಲು ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಮಾತನಾಡಿ, ರಾಹುಲ್ ಗಾಂಧಿ ನಮ್ಮ ನಾಯಕರು ಅಂತಹವರ ವಿರುದ್ಧ ಮಾತನಾಡುವ ನೈತಿಕತೆ ಬಿಜೆಪಿಯವರಿಗಿಲ್ಲ. ಮೊದಲು ಅಚ್ಛೇದಿನ ತರುವುದಾಗಿ ನಂಬಿಸಿ ಅಧಿಕಾರಕ್ಕೆ ಬಂದ ಬಿಜೆಪಿಯವರು ಜನ ಸಾಮಾನ್ಯರಿಗೆ ಹೊರೆಯಾಗುವಂತೆ ಮಾಡುತ್ತಿರುವ ಬೆಲೆಏರಿಕೆಯನ್ನು ನಿಲ್ಲಿಸಿ, ಜನಪರ ಆಡಳಿತ ನಡೆಸಲಿ ಎಂದು ಆಗ್ರಹಿಸಿದರು.
ರಾಹುಲ್ ಗಾಂಧಿ ಅವರ ವಿರುದ್ಧ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೂಡಲೇ ಬೇಷರತ್ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್, ಕೆ.ಜಿ. ಶಿವಕುಮಾರ್, ನಂಜಾನಾಯ್ಕ್, ಶಾರದಮ್ಮ, ಮಹಮ್ಮದ್ ಜಿಕ್ರಿಯಾ ಮತ್ತಿತರರು ಪಾಲ್ಗೊಂಡಿದ್ದರು.