ಲೋಕಲ್ ಸುದ್ದಿ

25ರಂದು ಬಿಜೆಪಿ ಯುವ ಮೋರ್ಚಾ  ಸಮಾವೇಶ 15 ಸಾವಿರ ಜನರು ಭಾಗವಹಿಸುವ ನಿರೀಕ್ಷೆ

ದಾವಣಗೆರೆ: ನಗರದ ಹದಡಿ ರಸ್ತೆಯ ವಿಶಾಲ್ ಮಾರ್ಟ್ ಪಕ್ಕದಲ್ಲಿರುವ ಮೈದಾನದಲ್ಲಿ ಬಿಜೆಪಿ ಯುವ ಮೋರ್ಚಾ ಸಮಾವೇಶ ನಡೆಯಲಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಶುಕ್ರವಾರ ಪತ್ರಕರ್ತರಿಗೆ ಈ ಮಾಹಿತಿ ತಿಳಿಸುತ್ತಾ, ಸುಮಾರು 15 ಸಾವಿರಕ್ಕೂ ಹೆಚ್ಚು ಜನರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇರುವುದಾಗಿ ಹೇಳಿದರು.

ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ರಾಜ್ಯ ಮುಖಂಡ ವಿಜಯೇಂದ್ರ, ಸಂಸದ ಜಿ.ಎಂ. ಸಿದ್ದೇಶ್ವರ ಸೇರಿದಂತೆ ಸಚಿವರುಗಳು, ಜಿಲ್ಲೆಯ ಶಾಸಕರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ರಾಜ್ಯದ ನಾಲ್ಕು ಕಡೆಯಿಂದ ಈಗಾಗಲೇ ಜನಸಂಕಲ್ಪ ಯಾತ್ರೆ ಆರಂಭಗೊಡಿದೆ. ಈ ಯಾತ್ರೆಗಳು ದಾವಣಗೆರೆಯಲ್ಲಿ ಸಮಾಗಮಗೊಳ್ಳಲಿದ್ದು, ಮಾರ್ಚ್ 15ರಿಂದ 25ರೊಳಗೆ `ಮಹಾಸಂಗಮ’ ಸಮಾವೇಶ ನಡೆಸಲಾಗುವುದು. ಸಮಾವೇಶದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಅಂದು ಸುಮಾರು 10 ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.

ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್, ಉಪಾಧ್ಯಕ್ಷ ಮಂಜಾನಾಯ್ಕ, ನಾಗರಾಜ್, ಶಾಂತರಾಜ ಪಾಟೀಲ್, ಆರ್.ಎಸ್. ಶಿವಪ್ರಕಾಶ್, ವಿಜಯೇಂದ್ರ, ಪವನ್ ಮೇಟಿ, ಶ್ರೀಧರ್, ಯಲ್ಲೇಶ್ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!