ನಾಳೆ ಸಾಗರಕ್ಕೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ
ಬೆಂಗಳೂರು :ಮಾ. 17 ರಂದು ವಿಜಯ ಸಂಕಲ್ಪ ಯಾತ್ರೆ ಸಾಗರಕ್ಕೆ ಆಗಮಿಸಲಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ಸೇರಿದಂತೆ ಅನೇಕ ಸಚಿವರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 4.30ಕ್ಕೆ ಕಾನ್ವೆಂಟ್ ಶಾಲೆ ಎದುರಿನ ನೆಹರೂ ಮೈದಾನದಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸಮಾವೇಶದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಸುನೀಲ್ ಕುಮಾರ್ ಬಿ.ಸಿ. ನಾಗೇಶ್, ಸಂಸದ ಬಿ.ವೈ. ರಾಘವೇಂದ್ರ ಬಿಜೆಪಿ ಜಿಲ್ಲಾ ಕೆ.ಡಿ. ಮೇಘರಾಜ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಮಾವೇಶದ ಮೂಲಕ ಡಬಲ್ ಇಂಜಿನ್ ಸರ್ಕಾರ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ನೀಡಿದ ಯೋಜನೆಗಳನ್ನು ಜನರ ಮನಸ್ಸಿಗೆ ತಲುಪಿಸುವ ಕಲಸ ಮಾಡಲಾಗುತ್ತದೆ ಹಾಗೂಮುಂದಿನ ಚುನಾವಣೆಯಲ್ಲಿ ಸಹ ಸಾಗರ ಕ್ಷೇತ್ರ ಸರಿದಂತೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ವಿಜಯಸಂಕಲ್ಪ, ಯಾವ ಪ್ರಮುಖ ಮಾತ್ರ ವಹಿಸಲಿದೆ ಎಂದು. ಹೇಳಿದರು.
ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಲೋಕನಾಥ್ ಬಿಳಿಸಿರಿ ನಗರ ಮಂಡಲ ಅಧ್ಯಕ್ಷ ಕೆ.ಆರ್. ಗಣೇಶಪ್ರಸಾದ್ ಮಾತನಾಡಿ, ಗ್ರಾಮಾಂತರ ಹಾಗೂ ನಗರ ಮಂಡಲ ಬೂತ್‌ನಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಸಂಬಂಧಪಟ್ಟಂತೆ ಪೂರ್ವಭಾವಿ ಸಭೆ ನಡೆಸಿದ್ದು, ಯಾತ್ರೆ ಯಶಸ್ಸಿಗೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.