ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ಇಲ್ಲಿ NSS ಘಟಕ-1&2 ,ಯುವ ರೆಡ್ ಕ್ರಾಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ ದಾವಣಗೆರೆ ಹಾಗೂ ರೆಡ್ ಕ್ರಾಸ್ ಸಂಸ್ಥೆ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್,ಆರ್,ಆಂಜನಪ್ಪ ಅವರು ಉದ್ಘಾಟಿಸುವ ಮೂಲಕ ಚಾಲನೆ ನೀಡಿದರು. ರಕ್ತದಾನ ಶಿಬಿರದಲ್ಲಿ ಸರಿಸುಮಾರು 47 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅದರಲ್ಲಿ 41 ವಿದ್ಯಾರ್ಥಿಗಳು ರಕ್ತದಾನ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆ ಡಾಕ್ಟರ್ ಹಾಗೂ ಅವರ ತಂಡ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಮುಖರಾದ ಆನಂದ ಜ್ಯೋತಿಯವರು ಹಾಗೂ ಅವರ ತಂಡ, ರೆಡ್ ಕ್ರಾಸ್ ವಿಭಾಗದ ಸಂಚಾಲಕರಾದ ನಟರಾಜ್, ಎನ್ ಎಸ್ ಎಸ್ ಘಟಕ 1 ಮತ್ತು 2 ಸಂಯೋಜಕರಾದ ಗುರುದೇವ್ ಹಾಗೂ ಡಾ.ಶಿವುಕುಮಾರ್ ಕಂಪ್ಲಿ, ಪ್ರೊ . ಭೀಮಣ್ಣ . ಸುಣಗಾರ ವಿವಿಧ ವಿಭಾಗದ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.