ರಕ್ತದಾನ, ನೇತ್ರದಾನ, ಅನ್ನ ದಾಸೋಹದ ಕಾರ್ಯಕ್ರಮ ಶ್ಲಾಘನೀಯ – ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ
ನ್ಯಾಮತಿ: ಶಾಲಾ ಶತಮಾನೋತ್ಸವದ ಸ್ಮರಣಾರ್ಥವಾಗಿ ರಕ್ತದಾನ, ನೇತ್ರದಾನ ಹಾಗೂ ಅನ್ನ ದಾಸೋಹದಂತಹ ಪುಣ್ಯದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ನಿಜಕ್ಕು ಶ್ಲಾಘನೀಯ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು. ಅವರು ನ್ಯಾಮತಿ ತಾಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮದಲ್ಲಿ ಭಾನುವಾರ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 111 ವರ್ಷಗಳ ಶಾಲಾ ಶತಮಾನೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿಯೊಬ್ಬ ಮನುಷ್ಯನಿಗೆ ಶಿಕ್ಷಣ ಮುಖ್ಯ ಶಿಕ್ಷಣ ಪಡೆಯದಿದ್ದಲ್ಲಿ ಬದುಕಿನಲ್ಲಿ ಅಂಧಕಾರ ಕವಿಯುವುದು ಇದನ್ನರಿತು ಎಲ್ಲರು ಶೀಕ್ಷಣವಂತರಾಗಬೇಕು. ಸರಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿ ಸಾವಿರಾರು ಕೋಟಿ ಅನುದಾನವನ್ನು ಖರ್ಚು ಮಾಡುತ್ತಿದೆ ಅನುದಾನ ಸಾರ್ಥಕತೆ ಪಡೆಯಬೇಕು , ಒಂದು ಕಾಲದಲ್ಲಿ ಶಿಕ್ಷಣ ಪಡೆಯುವುದು ಕಷ್ಟದ ಕೆಲಸವಾಗಿತ್ತು ಹಾಗೂ ಶಿಕ್ಷಣ ಎನ್ನುವುದು ಉಳ್ಳವರ ಸ್ವತ್ತಾಗಿತ್ತು. ಪ್ರಸ್ತುತ ದಿನಗಳಲ್ಲಿ ಕಡ್ಡಾಯ ಶಿಕ್ಷಣ ಜಾರಿಗೆ ಬಂದಿದೆ. ಪೋಷಕರು ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಎಚ್ಚೆತ್ತುಕೊಂಡು ತಪ್ಪದೇ ತಮ್ಮ ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ಕಳಿಸುತ್ತಿದ್ದಾರೆ ಇದು ಆರೋಗ್ಯಕರ ಬೆಳವಣಿಗೆ ಎಂದು ಹೇಳಿದರು. ತಾಲೂಕಿನ ಎಲ್ಲಾ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಹೊಸ ಕೊಠಡಿಗಳ ನಿರ್ಮಾಣಕ್ಕೆ ಸತತ ಪ್ರಯತ್ನ ಮಾಡಿ ಅವಳಿ ತಾಲೂಕಿನಲ್ಲಿ 127 ಹೊಸ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿಸಲಾಗಿದೆ, ದೊಡ್ಡೆತ್ಯತಿನಹಳ್ಳಿ ಗ್ರಾಮಕ್ಕೆ ಈಗಾಗಲೆ ರೂ.1ಕೋಟಿ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಲಾಗಿದೆ. ಹೆಚ್ಚುವರಿಯಾಗಿ ಸಿಸಿ ರಸ್ತೆಗೆ ರೂ.50 ಲಕ್ಷ ಮಂಜೂರು ಮಾಡಿಸಲಾಗಿದೆ ಎಂದು ಹೇಳಿದರು. ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಯೋಜಕರು ದೇಣಿಗೆ ನೀಡಿ ಎಂದು ಪ್ರಸ್ತಾವನೆ ಇಟ್ಟಾಗ ವೈಕ್ತಿಕವಾಗಿ ರೂ.51 ಸಾವಿರ ನೀಡಿದ್ದೇನೆ ಎಂದ ಅವರು, ಗ್ರಾಮದ ಅಭಿವೃದ್ಧಿಗೆ ನಾನು ಸದಾ ಬದ್ಧನಾಗಿದ್ದೇನೆ. ಗ್ರಾಮದ ಮುಖಂಡರುಗಳು ಅನೇಕ ಬೇಡಿಕೆಗಳನ್ನು ಮುಂದೆ ಇಟ್ಟಿದ್ದಾರೆ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತೇನೆ ಎಂದು ಹೇಳಿದರು.
ಮಂತ್ರಿ ಸ್ಥಾನದ ಆಕಾಂಕ್ಷಿ ನಾನಲ್ಲ:
ಅವಳಿ ತಾಲೂಕಿನ ಜನರು ನಾನು ಮಂತ್ರಿಯಾಗಬೇಕು ಎಂದು ಆಸೆ ಪಟ್ಟಿದ್ದಾರೆ. ನಾನು ಮಾತ್ರ ಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ ಇದರ ಬದಲು ಹೆಚ್ಚು ಅನುದಾನ ತಂದು ಕ್ಷೇತ್ರ ಅಭಿವೃದ್ಧಿ ಮಾಡುವುದೇ ನನ್ನ ಮುಖ್ಯ ಗುರಿ ಎಂದು ಹೇಳಿದರು. ಮಾಜಿ ಶಾಸಕ ಡಿ.ಜಿ.ಶಾಂತನಗೌಡ, ಜಿಪಂ ಮಾಜಿ ಸದಸ್ಯ ಡಿ.ಜಿ.ವಿಶ್ವನಾಥ್, ಡಿಡಿಪಿಐ ತಿಪ್ಪೇಶಪ್ಪ ಮಾತನಾಡಿದರು. ಇದೇ ಸಂದರ್ಭದಲ್ಲಿ ಸ್ಮಾರ್ಟ್ ಕ್ಲಾಸ್ ಕೋಠಡಿಯನ್ನು ಶಾಸಕ ಎಂ.ಪಿ.ರೇಣುಕಾಚಾರ್ಯ , ಶಾಲಾ ಶುದ್ಧ ನೀರಿನ ಘಟಕವನ್ನು ಮಾಜಿ ಶಾಸಕ ಡಿ.ಜಿ.ಶಾಂತನಗೌಡ , ಶಾಶ್ವತ ಕನ್ನಡ ಧ್ವಜ ಸ್ತಂಭವನ್ನು ಕಸಾಪ ತಾಲೂಕು ಅಧ್ಯಕ್ಷ ಡಿ.ಎಂ.ಹಾಲಾರಾಧ್ಯ ಉದ್ಘಾಟಿಸಿದರು. ಕಾರ್ಯಕ್ರಮದಡಿ ರಕ್ತನಿಧಿ ಕೇಂದ್ರ ಜಿಲ್ಲಾ ಚಿಗಟೇರಿ ಆಸ್ಪತ್ರೆ ದಾವಣಗೆರೆ ಹಾಗೂ ಹಳೆ ವಿದ್ಯಾರ್ಥಿಗಳ ಸಂಘದ ಸಂಯಕ್ತಾಶ್ರಯದಲ್ಲಿ ರಕ್ತದಾನ ಶೀಬಿರ, ಶಿವಮೊಗ್ಗ ಶಂಕರ್ ಕಣ್ಣಿನ ಆಸ್ಪತ್ರೆಯಿಂದ ನೇತ್ರದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಗ್ರಾಪಂ ಅಧ್ಯಕ್ಷೆ ತಿಮ್ಮಮ್ಮ, ಉಪಾಧ್ಯಕ್ಷ ಜೆ.ಪಿ.ಚಂದನ್, ಸದಸ್ಯರಾದ ಮಂಜೇಸ್, ಚಂದ್ರಮ್ಮ, ಸಾಧು ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಎಸ್.ಬಿ.ಶಿವಪ್ಪ, ಬಿಇಒ ಜಿ.ಇ.ರಾಜೀವ್ ಇತರ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರಭಾರ ಮುಖ್ಯ ಶಿಕ್ಷಕ ಕಿರಣ್‌ಕುಮಾರ್ ಪ್ರಾಸ್ತಾವಿಕ ಮಾತನಾಡಿದರು. ಇದೇ ಸಂದರ್ಭದಲ್ಲಿ ದಾನಿಗಳನ್ನು ಹಾಗೂ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ನ್ಯಾಮತಿ ತಾಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮದಲ್ಲಿ ಭಾನುವಾರ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 111 ವರ್ಷಗಳ ಶಾಲಾ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸುತ್ತೀರುವ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ , ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಮತ್ತು ಗಣ್ಯರು. ಇದ್ದರು.