ಬಿಜೆಪಿ ಚುನಾವಣಾ ಸಮಿತಿ ಅಧ್ಯಕ್ಷರಾಗಿ ಬೊಮ್ಮಾಯಿ

ಬಿಜೆಪಿ ಚುನಾವಣಾ ಸಮಿತಿ ಅಧ್ಯಕ್ಷರಾಗಿ ಬೊಮ್ಮಾಯಿ

ನವದೆಹಲಿ: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಅವರನ್ನು ಚುನಾವಣಾ ಸಮಿತಿ ಅಧ್ಯಕ್ಷರನ್ನಾಗಿ ಮಾಡಬಹುದು ಎಂಬ ಮಾತುಗಳು ಹುಸಿಯಾಗಿದ್ದು, ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ, ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸುವ ಸ್ಪಷ್ಟ ಸೂಚನೆಯನ್ನು ಪಕ್ಷದ ವರಿಷ್ಠರು ನೀಡಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಪ್ರಚಾರ ಸಮಿತಿಯ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬೊಮ್ಮಾಯಿ ನೇತೃತ್ವದಲ್ಲಿಯೇ ಚುನಾವಣೆಯನ್ನು ಎದುರಿಸಲಾಗುವುದು ಎಂದು ಈಗಾಗಲೇ ಪ್ರಚಾರ ಸಮಿತಿಯ ಸದಸ್ಯರು: ಬಿ.ಎಸ್‌.ಯಡಿಯೂರಪ್ಪ, ನಳಿನ್‌ ಕುಮಾರ್ ಕಟೀಲ್, ಡಿ.ವಿ.ಸದಾನಂದಗೌಡ, ಜಗದೀಶ ಶೆಟ್ಟರ್‌, ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಕೆ.ಎಸ್‌.ಈಶ್ವರಪ್ಪ, ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಆರ್‌.ಅಶೋಕ, ಶಶಿಕಲಾ ಜೊಲ್ಲೆ, ಸಿ.ಸಿ.ಪಾಟೀಲ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಪ್ರಭು ಚವ್ಹಾಣ, ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಸಿ.ಟಿ.ರವಿ, ವಿ. ಶ್ರೀನಿವಾಸಪ್ರಸಾದ್, ಪಿ.ಸಿ.ಮೋಹನ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ರಮೇಶ ಜಾರಕಿಹೊಳಿ, ಬಿ.ವೈ.ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ.
ಚುನಾವಣಾ ನಿರ್ವಹಣಾ ಸಮಿತಿ ಸದಸ್ಯರು: ಭಗವಂತ ಖೂಬಾ, ಕೋಟ ಶ್ರೀನಿವಾಸಪೂಜಾರಿ, ಅರವಿಂದ ಲಿಂಬಾವಳಿ, ರಘುನಾಥರಾವ್‌ ಮಲ್ಕಾಪುರೆ, ನಿರ್ಮಲ್‌ಕುಮಾರ್‌ ಸುರಾನ, ತೇಜಸ್ವಿನಿ ಅನಂತಕುಮಾರ್, ಎನ್‌.ರವಿಕುಮಾರ್, ಸಿದ್ದರಾಜು, ಅಶ್ವತ್ಥನಾರಾಯಣ, ಮಹೇಶ್‌ ಟೆಂಗಿನಕಾಯಿ, ಎಸ್‌.ಕೇಶವಪ್ರಸಾದ್‌, ಛಲವಾದಿ ನಾರಾಯಣಸ್ವಾಮಿ, ಗೀತಾ ವಿವೇಕಾನಂದ. ನೀಡಿದ್ದರು. ಅದಕ್ಕೆ ಈಗ ಅಂತಿಮ ಮುದ್ರೆ ಸಿಕ್ಕಂತಾಗಿದೆ.
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಅವರನ್ನು ಚುನಾವಣಾ ಸಮಿತಿ ಅಧ್ಯಕ್ಷರನ್ನಾಗಿ ಮಾಡಬಹುದು ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕಳೆದ ಕೆಲವು ತಿಂಗಳಿಂದ ಕೇಳಿ ಬಂದಿದ್ದವು. ಅವರಿಗೆ ಸಮಿತಿಯಲ್ಲಿ ಎರಡನೇ ಸ್ಥಾನ ನೀಡಲಾಗಿದೆ.
ಜೆ.ಪಿ.ನಡ್ಡಾ ನಿರ್ದೇಶನದಂತೆ ಪ್ರಚಾರ ಸಮಿತಿಗೆ 24 ಸದಸ್ಯರನ್ನು ಹಾಗೂ ನಿರ್ವಹಣಾ ಸಮಿತಿಗೆ 14 ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ರಾಷ್ಟ್ರೀಯ ‍ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಎರಡೂ ಸಮಿತಿಗಳಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್‌.ಸಂತೋಷ್‌ ಅವರ ಬೆಂಬಲಿ ಗರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದೆ.
ಶೋಭಾಗೆ ಮಹತ್ವದ ಹೊಣೆ: ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲು ಪಕ್ಷ ಉದ್ದೇಶಿಸಿತ್ತು. ಪ್ರಣಾಳಿಕೆ ಸಮಿತಿಯ ಮೊದಲ ಸಭೆಗೆ ಬರುವಂತೆ ರಾಜ್ಯ ನಾಯಕರು ಆಹ್ವಾನಿಸಿದ್ದರು. ನಾಲ್ಕು ಗೋಡೆಗಳ ಮಧ್ಯೆ ಕೆಲಸ ಮಾಡುವ ಈ ಜವಾಬ್ದಾರಿ ಬೇಡ ಎಂಬ ಕಾರಣ ನೀಡಿ ಈ ಹೊಣೆಯನ್ನು ಶೋಭಾ ನಿರಾಕರಿಸಿದ್ದರು. ಈ ಬಗ್ಗೆ ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್ ಅವರಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಅವರನ್ನು ಇದೀಗ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕರನ್ನಾಗಿ ಮಾಡಲಾಗಿದೆ. ಅದರೊಂದಿಗೆ, ಪ್ರಚಾರ ಸಮಿತಿಯ ಸದಸ್ಯರನ್ನಾಗಿಯೂ ನೇಮಿಸಲಾಗಿದೆ. ಈ ಮೂಲಕ, 2014ರ ಲೋಕಸಭಾ ಚುನಾವಣೆಯ ಬಳಿಕ ಶೋಭಾ ಅವರಿಗೆ ಮೊದಲ ಬಾರಿಗೆ ರಾಜ್ಯ ಮಟ್ಟದಲ್ಲಿ ಮಹತ್ವದ ಹೊಣೆ ವಹಿಸಲಾಗಿದೆ.
ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಹಿನ್ನಡೆಯಾಗಿದೆ ಎಂಬ ವಿಶ್ಲೇಷಣೆ ಪಕ್ಷದಲ್ಲಿ ನಡೆದಿದೆ. ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಡಲಾಗುವುದು ಎಂಬ ಮಾಹಿತಿ ಕೆಲವು ತಿಂಗಳಿಂದ ಪಕ್ಷದ ವಲಯದಲ್ಲಿ ಹರಿದಾಡಿತ್ತು. ಈಗ ಪಟ್ಟಿ ಹೊರಬಿದ್ದಾಗ ಅವರ ಬೆಂಬಲಿಗರಿಗೆ ನಿರಾಸೆ ಕಾದಿತ್ತು.
ತೇಜಸ್ವಿ, ಸುನಿಲ್, ಪ್ರತಾಪ ಹೆಸರೂ ಇಲ್ಲ: ವಿವಾದಾಸ್ಪದ ಮಾತುಗಳಿಂದಲೇ ಹೆಚ್ಚು ಸದ್ದುಮಾಡುವ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಮೈಸೂರು ಸಂಸದ ಪ್ರತಾಪ ಸಿಂಹ, ಇಂಧನ ಸಚಿವ ವಿ.ಸುನಿಲ್‌ ಕುಮಾರ್ ಅವರಿಗೆ ಸಮಿತಿಗಳಲ್ಲಿ ಸ್ಥಾನ ನೀಡಿಲ್ಲ. ಹಾಗೆಯೇ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನೂ ಹೊರಗಿಡಲಾಗಿದೆ.
ನಾನು ನಿಂತ ನೀರಲ್ಲ: ಸೋಮಣ್ಣ – ತಮಗೂ ಮತ್ತು ತಮ್ಮ ಪುತ್ರನಿಗೂ ಟಿಕೆಟ್‌ ನೀಡಬೇಕು ಎಂದು ಪಟ್ಟು ಹಿಡಿದು ಕುಳಿತಿರುವ ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಎರಡೂ ಸಮಿತಿಗಳಲ್ಲಿ ಜಾಗ ನೀಡಿಲ್ಲ. ಇವರು ಕಾಂಗ್ರೆಸ್‌ ಸೇರಲು ಪ್ರಯತ್ನ ನಡೆಸಿದ್ದಾರೆ ಎಂಬ ಮಾತುಗಳೂ ರಾಜಕೀಯ ವಲಯದಲ್ಲಿ ದಟ್ಟವಾಗಿದೆ.

Leave a Reply

Your email address will not be published. Required fields are marked *

error: Content is protected !!