ಕನ್ನಡಿಗರ ಹಿತಕ್ಕೆ ಎರಡೂ ಕೈಗಳು ಒಂದಾಗಿವೆ – ಸಿದ್ದರಾಮಯ್ಯ
ಬೆಂಗಳೂರು: ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ ಎಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಸಿದ್ಧರಾಮಯ್ಯ ಟ್ವಿಟ್ ಮಾಡಿದ್ದಾರೆ.
ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ನಿಂದ ಅಧಿಕೃತ ಘೋಷಣೆಯಾಗುತ್ತಲೇ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ.
ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಆ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನೂ, ಉಪ ಮುಖ್ಯಮಂತ್ರಿಯನ್ನಾಗಿ ಡಿ.ಕೆ ಶಿವಕುಮಾರ್ ಅವರನ್ನು ನೇಮಕ ಮಾಡಿರುವುದಾಗಿ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಗುರುವಾರ ಘೋಷಣೆ ಮಾಡಲಾಯಿತು.
ಅತ್ತ ಅಧಿಕೃತ ಘೋಷಣೆಯಾಗುತ್ತಲೇ ಇತ್ತ ಟ್ವೀಟ್ ಮಾಡಿದ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಡಿ.ಕೆ ಶಿವಕುಮಾರ್ ಅವರೊಂದಿಗಿನ ಚಿತ್ರವೊಂದನ್ನು ಹಂಚಿಕೊಂಡರು.
ಸಿಎಂ, ಡಿಸಿಎಂ ಮತ್ತು ಸಚಿವರ ಪದಗ್ರಹಣ ಕಾರ್ಯಕ್ರಮ ಶನಿವಾರ ನಡೆಯಲಿದೆ.