ಹಿಕ್ಕಿಂಗೆರೆ ಶಾಲೆಯ ಬಾಲಕರು, ಬಾಲಕಿಯರು ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ

ಹರಪನಹಳ್ಳಿ: ತಾಲೂಕಿನಲ್ಲಿ 2024-25ನೇ ಸಾಲಿನ ಅರಸಿಕೆರೆ ವಲಯ ಮಟ್ಟದ ಥ್ರೋಬಾಲ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಹಿಕ್ಕಿಂಗೆರೆಯ ಸರಕಾರಿ ಪ್ರೌಢಶಾಲೆಯ ಬಾಲಕರು ಮತ್ತು ಬಾಲಕಿಯರು ಪ್ರಥಮ ಸ್ಥಾನ ಪಡೆದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಅರಸಿಕೆರೆ ವಲಯಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದ ಹಿಕ್ಕಿಂಗೆರೆಯ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಥ್ರೋಬಾಲ್‌ನಲ್ಲಿ ಬಾಲಕ ಹಾಗೂ ಬಾಲಕಿಯರು ಪ್ರಥಮ ಸ್ಥಾನ, ರಿಲೆ ಓಟದಲ್ಲಿ ಬಾಲಕರು ಪ್ರಥಮ ಸ್ಥಾನ, ಶಟಲ್ ಬ್ಯಾಟ್‌ಮಿಟನ್ ಬಾಲಕರ ವಿಭಾಗದಲ್ಲಿ ಪ್ರಥಮ ಮತ್ತು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದರು.
ಈ ಶಾಲೆಯ ವಿದ್ಯಾರ್ಥಿಗಳು ಅನೇಕ ವರ್ಷಗಳಿಂದ ವಲಯ ಮಟ್ಟದ ಬಾಲಕಿಯರ ಹಾಗೂ ಬಾಲಕರ ಥ್ರೋಬಾಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸುತ್ತಾ ಕ್ರೀಡಾ ಕೂಟದಲ್ಲಿ ತಮ್ಮದೇ ಆದ ಚಾಪು ಮೂಡಿಸಿ ಹಿಕ್ಕಿಂಗೆರೆ ಶಾಲೆಯ ಹಿರಿಮೆಯನ್ನು ಹೆಚ್ಚಿಸುತ್ತ ಬಂದಿದ್ದಾರೆ.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಯರಾದ ಜಯಶ್ರೀ, ದೈಹಿಕ ಶಿಕ್ಷಕರಾದ ಮಹೇಶ್, ಶಿಕ್ಷಕರಾದ ಹೆಚ್.ಆನಂದ, ಬಿ.ಅಂಜಿನಪ್ಪ, ವೀರಮ್ಮ, ವೀರಭದ್ರಪ್ಪ, ಅಶೋಕ್, ಮಂಜುನಾಥ್ ಹಾಗೂ ಶಾಲೆಯ ಹಳೇಯ ವಿದ್ಯಾರ್ಥಿಗಳು ಈ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಆಟಗಾರರಿಗೆ ಅಭಿನಂದನೆ ಸಲ್ಲಿಸಿದರು.