ಮತದಾರರಿಗೆ ಲಂಚ: ಬಿಜೆಪಿ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರು ಪ್ರತಿ ಮತದಾರನಿಗೆ 6000 ರೂ.ಲಂಚದ ಆಮಿಷ ಒಡ್ಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿ, ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರಿಗೆ ದೂರು ದಾಖಲಿಸಿದೆ.
ಬಹಿರಂಗ ಆಮಿಷದ ಮೂಲಕ ರಾಜ್ಯದ 5 ಕೋಟಿ ಮತದಾರರನ್ನು 30 ಸಾವಿರ ಕೋಟಿ ಲಂಚದ ಮೂಲಕ ಖರೀದಿ ಮಾಡಲು ಸಂಚು ನಡೆಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರಿಗೆ ಇಂದು ಪಕ್ಷದ ವತಿಯಿಂದ ದೂರು ನೀಡಿರುವುದಾಗಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗೆ ನಡದ ಕಾರ್ಯಕ್ರಮವೊಂದರಲ್ಲಿ ಶಾಸಕ ರಮೇಶ್ ಜಾರಕಿಹೊಳಿ, ಮತದಾರರಿಗೆ 6 ಸಾವಿರ ರೂ. ಕಾಣಿಕೆ ಕೊಡುವ ತಾಕತ್ತು ನಮಗೂ ಇದೆ ಎಂದು ಹೇಳಿದ್ದರು.

 
                         
                       
                       
                       
                       
                      