ಮಂಗಳೂರು: ನಿರ್ಮಾಣ ಹಂತದ ಸೇತುವೆ ಕುಸಿತ, ಏಳು ಜನರಿಗೆ ಗಾಯ
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆಯ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದಿದೆ. ಪರಿಣಾಮ ಘಟನೆಯಲ್ಲಿ ಏಳು ಜನರು ಗಾಯಗೊಂಡಿದ್ದಾರೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ಕಾರ್ಮಿಕನೋರ್ವ ಸುಮಾರು 1 ಗಂಟೆಗಳ ಕಾಲ ಸಿಲುಕಿಕೊಂಡು ಕಾಲು ಜಖಂಗೊಂಡು ನರಳಾಡುತ್ತಿದ್ದ. ಸ್ಥಳೀಯರ ಸಹಾಯದಿಂದ ಸಿಲುಕಿಕೊಂಡ ಕಾರ್ಮಿಕನನ್ನು ಮೇಲಕ್ಕೆತ್ತಲಾಗಿದೆ. ತಕ್ಷಣವೇ ಗಂಭೀರ ಗಾಯಗೊಂಡ ಕಾರ್ಮಿಕರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸರಕಾರದ ಗುತ್ತಿಗೆ ಆಧಾರದ ಮೇಲೆ ಕೆಲಸದ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.