ಮಹಿಳಾ ಮೀಸಲಾತಿಗೆ ಒತ್ತಾಯಿಸಿ ಬಿಆರ್‌ಎಸ್‌ ನಾಯಕಿ ಇಂದು ಸತ್ಯಾಗ್ರಹ

ಮಹಿಳಾ ಮೀಸಲಾತಿಗೆ ಒತ್ತಾಯಿಸಿ ಬಿಆರ್‌ಎಸ್‌ ನಾಯಕಿ ಇಂದು ಸತ್ಯಾಗ್ರಹ

ನವದೆಹಲಿ: ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಹಿರಿಯ ನಾಯಕಿ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರ ಪುತ್ರಿ ಕೆ.ಕವಿತಾ ಅವರು ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸುವಂತೆ ಒತ್ತಾಯಿಸಿ ಇಂದು ನವದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ತೃಣಮೂಲ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ಹಲವು ಪಕ್ಷಗಳ ನಾಯಕರು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ನಡೆಯುವ ಈ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿಯೂ ಆಗಿರುವ ಕವಿತಾ ಅವರು ನಿನ್ನೆ 18 ಪಕ್ಷಗಳು ಪ್ರತಿಭಟನೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿವೆ ಎಂದು ಹೇಳಿದ್ದರು. ಆದರೆ ಕಾಂಗ್ರೆಸ್‌ ಪಕ್ಷ ಈ ಹೋರಾಟಕ್ಕೆ ಬೆಂಬಲ ಸೂಚಿಸಿಲ್ಲ.
ಮಹಿಳಾ ಮೀಸಲಾತಿ ವಿಧೇಯಕ ಕುರಿತು ಮಾತನಾಡಿದ ಕವಿತಾ, 2014 ಮತ್ತು 2019ರ ಸಾರ್ವತ್ರಿಕ ಚುನಾವಣೆಯ ಪೂರ್ವದಲ್ಲಿ ಬಿಜೆಪಿ ಈ ವಿಧೇಯಕ ಜಾರಿಗೆ ತರುವುದಾಗಿ ಭರವಸೆ ನೀಡಿತ್ತು, ಆದರೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೂ ಮಾತನ್ನು ಉಳಿಸಿಕೊಂಡಿಲ್ಲ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!