ಮೈಸೂರು : ಬಿ ಎಸ್ ಯಡಿಯೂರಪ್ಪ ಜನಪ್ರಿಯತೆ ಈಗಲೂ ಕುಗ್ಗಿಲ್ಲ. ಬಿಎಸ್ ವೈ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ. ಬಿಎಸ್ ವೈ ನವರು ಒಂದು ಶಕ್ತಿ ಬಿಎಸ್ ವೈ . ಅವರನ್ನ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಿಕಾರಿಪುರದ ಬಿಜೆಪಿ ಅಭ್ಯರ್ಥಿ ಬಿವೈ ವಿಜಯೇಂದ್ರ ತಿಳಿಸಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಬಿವೈ ವಿಜಯೇಂದ್ರ, ದೇಶವನ್ನ ದಿವಾಳಿ ಮಾಡಿರುವುದು ಕಾಂಗ್ರೆಸ್. ಜೆಡಿಎಸ್ ಅತಂತ್ರ ಫಲಿತಾಂಶ ಬರಲೆಂದು ಕಾಯುತ್ತಿದ್ದಾರೆ. ಆದರೆ ಜನರು ಮತ್ತೊಮ್ಮೆ ಬಿಜೆಪಿಗೆ ಸ್ಪಷ್ಟ ಬಹುಮತ ನೀಡುತ್ತಾರೆ ಎಂದರು.
ಬಿಜೆಪಿ ಕಾರ್ಯಕರ್ತರು ಕಟ್ಟಿ ಬೆಳೆಸಿರುವ ಪಕ್ಷ ಸರ್ವೇ ಆಧಾರದ ಮೇಲೆ ಟಿಕೆಟ್ ನೀಡಲಾಗಿದೆ. ಇಡಿ ದೇಶದ ಬೆಳವಣಿಗೆಯಲ್ಲಿ ಕರ್ನಾಟಕದ ಮಹತ್ವ ಪಾತ್ರವಿದೆ. ಜಿಎಸ್ ಟಿ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ ಎಂದರು.
