ಬಿ ಎಸ್ ಯಡಿಯೂರಪ್ಪ ರಾಜೀನಾಮೆ ಅಂಗೀಕಾರ: ಸಚಿವ ಪರಿಷತ್ ವಿಸರ್ಜನೆ

ದಾವಣಗೆರೆ: ಎರಡು ವರ್ಷಗಳ ತಮ್ಮ ಅಧಿಕಾರಾವಧಿಯ ಸಾಧನೆಗಳನ್ನು ರಾಜ್ಯದ ಜನರ ಮುಂದೆ ಹರವಿ, ಭಾವುಕ ಭಾಷಣದ ತರುವಾಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಬೆಂಗಳೂರಿನ ರಾಜಭವನದ ರಾಜ್ಯಪಾಲರ ಕಚೇರಿಗೆ ತೆರಳಿ ಬಿಎಸ್ ವೈ ರಾಜೀನಾಮೆ ಸಲ್ಲಿಸಿದ್ದು, ಯಡಿಯೂರಪ್ಪ ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದು, ಅವರ ನೇತೃತ್ವದ ಸಚಿವ ಪರಿಷತ್ತನ್ನು ವಿಸರ್ಜಿಸಿರುವುದಾಗಿ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ತಿಳಿಸಿದ್ದಾರೆ.