ಪಂಚಾಯತಿ ಅಧ್ಯಕ್ಷರು ಕೂಡ ರಾಜೀನಾಮೆ ನೀಡಲು ಹಿಂದೇಟು ಹಾಕುತ್ತಾರೆ.! ಅಂತದ್ರಲ್ಲಿ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬೊಮ್ಮಾಯಿ ರನ್ನ ಸಿ ಎಂ ಮಾಡಿದ್ದೇನೆ – ರಾಜೀನಾಮೆ ಸಮರ್ಥಿಸಿಕೊಂಡ ಬಿ ಎಸ್ ವೈ

ದಾವಣಗೆರೆ: ಗ್ರಾಮ ಪಂಚಾಯತಿ ಅಧ್ಯಕ್ಷರು ಕೂಡ ರಾಜೀನಾಮೆ ನೀಡಲು ಹಿಂದೆ ಮುಂದೆ ನೋಡುವ ವಾತಾವರಣದಲ್ಲಿ ತಾವ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬೊಮ್ಮಯಿ ರನ್ನು ಸಿಎಂ ಮಾಡಿದ್ದೇನೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮನ್ನು ಸಮರ್ಥಿಸಿಕೊಂಡರು.
ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಡಿಎಸ್ ಅರುಣ್ ಪರ ಮತಯಾಚನೆಗೆ ಆಗಮಿಸಿದ್ದ ಬಿಎಸ್ ವೈ ಮಾತನಾಡಿ, ರಾಜೀನಾಮೆ ಕೊಟ್ಟು ನಾನು ಮನೆಯಲ್ಲಿ ಕೂತಿಲ್ಲ, ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಮುಂದಿನ ಚುನಾವಣೆಯಲ್ಲಿ 140 ಕ್ಕೂ ಹೆಚ್ಚು ಸ್ಥಾನ ಪಡೆದು ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುತ್ತೇನೆ ಎಂದು ಶಪಥ ಮಾಡಿದರು.
ಕಾಂಗ್ರೆಸ್ ನವರು ಹಣ ಬಲದಿಂದ, ಜಾತಿ ವಿಷ ಬೀಜ ಬಿತ್ತಿ ಗೆಲ್ಲುತ್ತಿದ್ದ ಕಾಲವೊಂದಿತ್ತು. ಈಗ ದೇಶದಲ್ಲಿ ಜನರು ಕಾಂಗ್ರೆಸ್ ನ್ನು ತಿರಸ್ಕರಿಸಿದ್ದು, ಆ ಪಕ್ಷ ಹೇಳ ಹೆಸರಿಲ್ಲದಂತಾಗಿದೆ ಎಂದು ವಾಗ್ದಾಳಿ ನಡೆಸಿದರು.
ದೇಶದ ಜನರು ಕೇಂದ್ರದಲ್ಲಿ ಮೋದಿ ಅವರ ನಾಯಕತ್ವವನ್ನು ಮೆಚ್ಚಿಕೊಂಡಿದ್ದಾರೆ. ಇನ್ನೂ 25 ವರ್ಷಗಳ ಕಾಲ ಬಿಜೆಪಿ ಮೋದಿ ನೇತೃತ್ವದಲ್ಲಿ ದೇಶದಲ್ಲಿ ಆಡಳಿತ ನಡೆಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತಿ ಸದಸ್ಯರ ಸಮಸ್ಯೆಗಳನ್ನು ಅರಿಯುವಂತಹ ವ್ಯಕ್ತಿ ಅರುಣ್ ಅವರನ್ನು ಡಿ.10 ರಂದು ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಗೆಲ್ಲಿಸಬೇಕೆಂದು ಕೋರಿದರು.
ಸಂಸದ ಜಿಎಂ ಸಿದ್ದೇಶ್ವರ್, ಶಾಸಕ ಲಿಂಗಣ್ಣ, ಎಸ್ ಎ ರವೀಂದ್ರನಾಥ್, ಮಾಜಿ ಸಚೇತಕ ಡಾ. ಎ.ಹೆಚ್. ಶಿವಯೋಗಿಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.