ರಾಜ್ಯ ಸುದ್ದಿ

ಮೂರು ಜ್ಯೋತಿಗಳಿಗೆ ಬಂಪರ್ ! ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ನೇರ ಲಾಭ

ಮೂರು ಜ್ಯೋತಿಗಳಿಗೆ ಬಂಪರ್ ! ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ನೇರ ಲಾಭ

ಬೆಂಗಳೂರು : ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಮೂರು ಜ್ಯೋತಿ ಯೋಜನೆಗಳನ್ನು ಗೃಹ ಜ್ಯೋತಿ ಯೋಜನೆಯಲ್ಲಿ ವಿಲೀನ ಮಾಡಿದೆ ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜೋತಿಯ ಲಾಭ ದಕ್ಕಲಿದೆ.

ಮೂರು ಜ್ಯೋತಿಗಳಿಗೆ ಬಂಪರ್ ! ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ನೇರ ಲಾಭ

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂದ ಮೇಲೆ ಕೊಟ್ಟ ಮಾತಿನಂತೆ ಗೃಹ ಜ್ಯೋತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಗೃಹ ಜ್ಯೋತಿ ಯೋಜನೆ ಅಡಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಫ್ರೀ ನೀಡಲಾಗುತ್ತಿದೆ. ಜುಲೈ 1ರಿಂದಲೇ ಈ ಯೋಜನೆ ಜಾರಿಗೆ ಬಂದಿದೆ. ಆದರೆ ಈಗಾಗಲೇ ಜಾರಿಯಲ್ಲಿರುವ ಭಾಗ್ಯಜ್ಯೋತಿ ಕುಟೀರ ಜ್ಯೋತಿ ಅಮೃತ ಜ್ಯೋತಿ ಯೋಜನೆಗಳ ಭವಿಷ್ಯವೇನು ?ಇದರ ಫಲಾನುಭವಿಗಳಿಗೆ ಏನಾಗುತ್ತೆ? ಎನ್ನುವ ಗೊಂದಲ ಕಾಡುತ್ತಿತ್ತು ಇದೀಗ ಇಂಧನ ಸಚಿವ ಕೆಜೆ ಜಾರ್ಜ್ ವಿಶೇಷ ಕಾಳಜಿ ವಹಿಸಿ ಹೊಸ ಮಾರ್ಗಸೂಚಿಯನ್ನು ಹೊರಡಿಸುವ ಮೂಲಕ ಈ ಎಲ್ಲಾ ಫಲಾನುಭವಿಗಳಿಗೆ ಖುಷಿ ಸುದ್ದಿ ಕೊಟ್ಟಿದ್ದಾರೆ

ಮೂರು ಜ್ಯೋತಿಗಳಿಗೆ ಬಂಪರ್ ! ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ನೇರ ಲಾಭ

ಭಾಗ್ಯ ಜ್ಯೋತಿ ಕುಟುಂಬ ಜ್ಯೋತಿಗೆ ಈವರೆಗೆ 40 ಯೂನಿಟ್ ಫ್ರೀ ಇತ್ತು.
ಈಗ ಅದನ್ನು 53 ಯೂನಿಟ್ ಹಾಗೂ 10% ಹೆಚ್ಚುವರಿ ಫ್ರೀ ಕರೆಂಟ್ ನೀಡುವುದಾಗಿ ಘೋಷಿಸಿದೆ. ಹಾಗೆಯೇ ಅಮೃತ ಜ್ಯೋತಿಗೆ 75 ಯೂನಿಟ್ ಇತ್ತು ಈಗ ಅದನ್ನು 75 ಯೂನಿಟ್ ಪ್ಲಸ್ 10% ಮಾಡಿದ್ದಾರೆ. ಈಗ ಎಲ್ಲರೂ ಗೃಹ ಜ್ಯೋತಿ ವ್ಯಾಪ್ತಿಗೆ ಬರುತ್ತಾರೆ ಅವರಿಗೆ ಹೆಚ್ಚುವರಿ ಯೂನಿಟ್ ಗಳನ್ನು ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ

ಈ ಮೂರು ಜ್ಯೋತಿಗಳ ಫಲಾನುಭವಿಗಳಲ್ಲಿ ಇದ್ದಂತಹ ಗೊಂದಲವನ್ನು ಇಂಧನ ಸಚಿವ ಕೆಜೆ ಜಾರ್ಜ್ ನಿವಾರಿಸುವಲ್ಲಿ ಯಶಸ್ವಿಯಾಗಿದ್ದಾರೆ ನ. ಅಷ್ಟೇ ಅಲ್ಲ ಇವರಿಗೂ ಹೆಚ್ಚುವರಿ ಫ್ರೀ ಕರೆಂಟ್ ನೀಡುವ ಮೂಲಕ ರಾಜ್ಯ ಸರ್ಕಾರ ಬಡ ಕುಟುಂಬಗಳ ನೆರವಿಗೆ ನಿಂತಿದೆ. ಸರ್ಕಾರದ ಈ ಹೊಸ ನಿರ್ಧಾರದಿಂದಾಗಿ ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ಇದರಿಂದ ನೇರ ಲಾಭ ಸಿಗಲಿದೆ.

Click to comment

Leave a Reply

Your email address will not be published. Required fields are marked *

Most Popular

To Top