ಸುಳ್ಯ : ಬಸ್ ಮತ್ತು ಬೈಕ್ ಅಪಘಾತದಲ್ಲಿ ಶಿಕ್ಷಕ ನಿಧನ

ಸುಳ್ಯ : ಬೈಕ್ ಮತ್ತು ಬಸ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕರೊಬ್ಬರು ಸಾವನಪ್ಪಿದ ಘಟನೆ ಪಾಲಡ್ಕ ಎಂಬಲ್ಲಿ ಸಂಭವಿಸಿದೆ.
ಮೃತರನ್ನು ಪದ್ಮನಾಭ ಎಂದು ಗುರುತಿಸಲಾಗಿದೆ.
ಇಂದು ಬೆಳಿಗ್ಗೆ ಪಾಲಡ್ಕದಲ್ಲಿ ಶಿಕ್ಷಕ ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್ ಮತ್ತು ಖಾಸಗಿ ಬಸ್ ಮಧ್ಯೆ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.