ಮಾರ್ಚ್ 9 ರಂದು ದಾವಣಗೆರೆ ಮುಖ್ಯ ಬಸ್ ನಿಲ್ದಾಣ ಮತ್ತು ಬೇತೂರು ರಸ್ತೆ ನೂತನ ಬಸ್ ನಿಲ್ದಾಣ ಉದ್ಘಾಟನೆ
ದಾವಣಗೆರೆ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಪುನರ್ ನಿರ್ಮಾಣಗೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ದಾವಣಗೆರೆ ಮುಖ್ಯ ಬಸ್ ನಿಲ್ದಾಣದ ಮತ್ತು ಬೇತೂರು ರಸ್ತೆ ನೂತನ ಬಸ್ ನಿಲ್ದಾಣ ಉದ್ಘಾಟನೆ ಹಾಗೂ ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಮತ್ತು ನೂತನ ಬಸ್ ಮಾರ್ಗಗಳ ಉದ್ಘಾಟನಾ ಸಮಾರಂಭವನ್ನು ಮಾರ್ಚ್ 9 ರಂದು ಮಧ್ಯಾಹ್ನ 12 ಗಂಟೆಗೆ ದಾವಣಗೆರೆ ಮುಖ್ಯ ಬಸ್ ನಿಲ್ದಾಣದ ಆವರಣದಲ್ಲಿ ಆಯೋಜಿಸಲಾಗಿದೆ.
ದಾವಣಗೆರೆ ಮುಖ್ಯ ಬಸ್ ನಿಲ್ದಾಣವನ್ನು ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಉದ್ಘಾಟಿಸುವರು. ಬೇತೂರು ರಸ್ತೆಯ ನೂತನ ಬಸ್ ನಿಲ್ದಾಣವನ್ನು ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಉದ್ಘಾಟಿಸುವರು.
ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ನಗರಾಭಿವೃದ್ದಿ ಸಚಿವರಾದ ಬಿ.ಎಸ್ ಸುರೇಶ್(ಭೈರತಿ), ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಸ್.ಆರ್.ಶ್ರೀನಿವಾಸ, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ದಿ ಮತ್ತು ಹಣಕಾಸು ನಿಗಮ ನಿಯಮಿತದ ಅಧ್ಯಕ್ಷರಾದ ಎಸ್.ಎನ್.ನಾರಾಯಣಸ್ವಾಮಿ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ಮಹಾನಗರ ಪಾಲಿಕೆ ಮೇಯರ್ ವಿನಾಯಕ ಬಿ.ಹೆಚ್, ವಿಧಾನ ಪರಿಷತ್ ಸದಸ್ಯರಾದ ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್.ಎನ್, ತೇಜಸ್ವಿನಿಗೌಡ, ಎಸ್.ಎಲ್.ಭೋಜೇಗೌಡ, ವೈ.ಎ ನಾರಾಯಣಸ್ವಾಮಿ, ಚಿದಾನಂದ
ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕ.ರಾ.ರ.ಸಾ.ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ವಿ.ಅನ್ಬುಕುಮಾರ್, ಕೈಗಾರಿಕಾಭಿವೃದ್ದಿ ಆಯುಕ್ತರು ಹಾಗೂ ಕೈಗಾರಿಕೆ, ವಾಣಿಜ್ಯ ಇಲಾಖೆಯ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ದಾವಣಗೆರೆ ಸ್ಮಾರ್ಟ್ ಸಿಟಿ ಅಧ್ಯಕ್ಷರಾದ ಗುಂಜನ್ ಕೃಷ್ಣ, ನಗರ ಭೂಸಾರಿಗೆ ನಿರ್ದೇಶನಾಲಯದ ಆಯುಕ್ತರು ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ದೀಪಾ ಎಂ, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ದಿ ಮತ್ತು ಹಣಕಾಸು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಲಕ್ಷ್ಮೀಕಾಂತ್ ರೆಡ್ಡಿ, ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್, ಪಾಲಿಕೆ ಆಯುಕ್ತರಾದ ರೇಣುಕಾ, ಸ್ಮಾಟ್ ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರಾದ ವೀರೇಶಕುಮಾರ ಉಪಸ್ಥಿತರಿರುವರು.