ಉಪಚುನಾವಣೆ ಫಲಿತಾಂಶ ಭವಿಷ್ಯದ ದಿಕ್ಸೂಚಿ – ದಿನೇಶ್ ಕೆ ಶೆಟ್ಟಿ.
ದಾವಣಗೆರೆ: ಕಾಂಗ್ರೆಸ್ ಪಕ್ಷದ ವತಿಯಿಂದ ಮಹಾನಗರ ಪಾಲಿಕೆ ಆವರಣದಲ್ಲಿ ಹಾನಗಲ್ ಉಪಚುನಾವಣೆ ಫಲಿತಾಂಶದ ಗೆಲುವಿನ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ ಹಾನಗಲ್
ಹಾಗೂ ಸಿಂದಗಿ ಉಪ ಚುನಾವಣಾ ಫಲಿತಾಂಶ ಭವಿಷ್ಯದ ದಿಕ್ಸೂಚಿಯಾಗಿದ್ದು 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಿಶ್ಚಿತವಾಗಿ ಅಧಿಕಾರ ಹಿಡಿಯಲಿದೆ, ಹಾನಗಲ್ ಕ್ಷೇತ್ರದಲ್ಲಿ ಪಕ್ಷ ಜಯಭೇರಿ ಗಳಿಸಿದ್ದು ಸಿಂದಗಿ ಕ್ಷೇತ್ರದಲ್ಲಿ ನಮ್ಮ ಮತಗಳಿಕ್ಕೆ 22 ಸಾವಿರದಿಂದ 62 ಸಾವಿರಕ್ಕೆ ಏರಿಕೆಯಾಗಿದೆ ಎಂದರು, ಜನತೆ ಪೆಟ್ರೋಲ್, ಡೀಸೆಲ್, ಅಡಿಗೆ ಅನಿಲ ಹಾಗೂ ದಿನ ನಿತ್ಯಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದು ಈ ಚುನಾವಣಾ ಫಲಿತಾಂಶ ಅದಕ್ಕೆ ಸಾಕ್ಷಿ ಎಂದು ತಿಳಿಸಿದರು.
ವಿಪಕ್ಷ ನಾಯಕ ನಾಗರಾಜ್, ಹಾನಗಲ್ ವೀಕ್ಷಕ ಗಡಿ ಗುಡಾಳ್ ಮಂಜುನಾಥ್, ಪಾಲಿಕೆ ಸದಸ್ಯರಾದ ಜೆ.ಎನ್. ಶ್ರೀನಿವಾಸ್, ವಿನಾಯಕ ಪೈಲ್ವಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಶಿವಕುಮಾರ್, ಮುಖಂಡರಾದ ಹುಲ್ಮನಿ ಗಣೇಶ್ ಹಾಗೂ ಆಶಾ ಗಣೇಶ್, ಸಾಗರ್ ಇನ್ನು ಮುಂತಾದವರು ಭಾಗವಹಿಸಿದ್ದರು.