ಬ್ಯಾಡಗಿಹಾಳ 311 ನಿರಾಶ್ರಿತರಿಗೆ ಸಚಿವೆ ಶಶಿಕಲಾ ಜೊಲ್ಲೆಯವರಿಂದ ಹಕ್ಕು ಪತ್ರ ವಿತರಣೆ

shashikala jollya

ವಿಜಯಪುರ: ಭೀಮಾ ನದಿಗೆ ಸೊನ್ನ ಗ್ರಾಮದಲ್ಲಿ ಬ್ಯಾರೇಜ್ ನಿರ್ಮಾಣದಿಂದ ಮುಳುಗಡೆಯಾಗಿ ಮನೆ ಕಳೆದುಕೊಂಡ ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಬ್ಯಾಡಗಿಹಾಳ ಗ್ರಾಮದ ನಿರಾಶ್ರಿತರಿಗೆ ಮುಜರಾಯಿ, ವಕ್ಪ್ ಮತ್ತು ಹಜ್ ಸಚಿವರಾದ ಶಶಿಕಲಾ ಜೊಲ್ಲೆಯವರು ನಿವೇಶನ ಹಕ್ಕು ಪತ್ರ ವಿತರಣೆ ಮಾಡಿದರು.
ಸೋಮವಾರ ಬ್ಯಾಡಗಿಹಾಳ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು 311 ನಿರಾಶ್ರಿತರಿಗೆ ನಿವೇಶನಗಳ ಹಕ್ಕುಪತ್ರ ವಿರತರಿಸಿದರು.ಅಫಜಲಪುರ ತಾಲೂಕಿನ ಸೊನ್ನ ಗ್ರಾಮದಲ್ಲಿ ಬ್ಯಾರೇಜ್ ನಿರ್ಮಾಣದಿಂದ ಈ ಗ್ರಾಮದ ಜನರು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದರು.

ಈ ಜನರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸಚಿವರಾದ ಶಶಿಕಲಾ ಜೊಲ್ಲೆಯವರು ಬ್ಯಾಡಗಿಹಾಳ ಗ್ರಾಮದ ಜನರಿಗೆ ಹಕ್ಕು ಪತ್ರ ವಿತರಿಸುವ ಭರವಸೆ ನೀಡಿದ್ದರು. ಸುಮಾರು 30 ಎಕರೆ ಪ್ರದೇಶದಲ್ಲಿ ನಿರಾಶ್ರಿತರಿಗೆ ನಿವೇಶನ ಜೊತೆಗೆ ಶಾಲೆ, ಉದ್ಯಾನವನ, ದೇವಸ್ಥಾನ, ಸಮುದಾಯ ಭವನ, ನೀರಿನ ಟ್ಹಾಂಕ್, ವಿದ್ಯುತ್ ಕಂಬಗಳ ಹಾಕಲು ಕ್ರಮ ವಹಿಸಲಾಗಿದೆ,

ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿದ್ದು, ಗ್ರಾಮದ ಜನರ ಸಮ್ಮುಖದಲ್ಲಿಯೇ ಇಂಡಿ ಉಪ ವಿಭಾಗಾಧಿಕಾರಿ, ಸಿಂಧಗಿ ತಹಸೀಲ್ದಾರ್ , ಅಫಜಲಪುರ ಕೆಎನ್ ಎನ್ ಎಲ್ ಕಾರ್ಯಪಾಲಕ ಎಂಜನೀಯರ್, ಸಿಂಧಗಿ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ವಿಡಿಯೊ ಚಿತ್ರೀಕರಣದ ಮೂಲಕ ಪಾರದರ್ಶಕವಾಗಿ ಫಲಾನುಭವಿಗಳ ಆಯ್ಕೆ ಮಾಡಲಾಗಿದೆ.

ಆಯ್ಕೆಯಾದ 311 ಫಲಾನುಭಗಳಿಗೆ ವಿಜಯಪುರ ಜಿಲ್ಲಾ ಪ್ರವಾಹ ಮತ್ತು ಕೊರೊನಾ ಉಸ್ತುವಾರಿ ಸಚಿವರಾಗಿರುವ ಶಶಿಕಲಾ ಜೊಲ್ಲೆಯವರು ಫಲಾನುಭವಿಗಳಿಗೆ ಹಕ್ಕು ಪತ್ರ ವಿರತರಣೆ ಮಾಡಿದರು.
ಕಾರ್ಯಕ್ರಮದ ಸಾನಿಧ್ಯವನ್ನು ಬ್ಯಾಡಗಿಹಾಳ ಮಹಾಸಂಸ್ಥಾನದ ಬಸವರತ್ನ ಮಹಾಲಿಂಗೇಶ್ವರ ಮಹಾ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ,

ವಿಧಾನ ಪರಿಷತ್ ಸದಸ್ಯರಾದ ಹನುಮಂತ ನಿರಾಣಿ, ಅರುಣ್ ಶಹಾಪುರ್, ಲಿಂಬೆ ಹಣ್ಣಿನ ಮಂಡಳಿ ಅಧ್ಯಕ್ಷ ಅಶೋಕ್ ಅಲ್ಯಾಪುರ ಹಾಗೂ ವಿಜಯಪುರ ಜಿಲ್ಲಾಧಿಕಾರಿ ಸುನಿಲ್ ಕುಮಾರ್, ಎಸ್ಪಿ ಆನಂದಕುಮಾರ್, ಜಿಲ್ಲಾ ಪಂಚಾಯತ್ ಸಿಇಒ ಗೋವಿಂದರೆಡ್ಡಿ, ಎಸಿ ರಾಹುಲ್ ಶಿಂಧೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!