ತಾತನ ಪರವಾಗಿ ಮೊಮ್ಮಗನಿಂದ ಪ್ರಚಾರ

ತಾತನ ಪರವಾಗಿ ಮೊಮ್ಮಗನಿಂದ ಪ್ರಚಾರ

ದಾವಣಗೆರೆ: ಬರುವ 2023ರ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲಿರುವ ಹಾಲಿ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರ ಪರವಾಗಿ ಮೊಮ್ಮಗ ಯುವ ಉದ್ಯಮಿ ಸಮರ್ಥ್ ಎಂ. ಶಾಮನೂರು(ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪುತ್ರ) ಅವರು ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.

ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್‍ನ ಎಸ್.ಎಂ.ಕೃಷ್ಣ ನಗರದಲ್ಲಿ ಮನೆ-ಮನೆಗೆ ತೆರಳಿ ಮುಂಬರುವ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪನವರಿಗೆ ಮತ ಚಲಾಯಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಸುಧಾ, ಮುಖಂಡ ಇಟ್ಟಿಗುಡಿ ಮಂಜುನಾಥ್, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸಾಗರ್ ಎಂ.ಹೆಚ್., ಎಸ್.ಎಂ.ಕೃಷ್ಣ ನಗರದ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!