5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ಆದೇಶ ರದ್ದು; ಹೈಕೋರ್ಟ್ ಮಹತ್ವದ ತೀರ್ಪು

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ಆದೇಶ ರದ್ದು; ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ರಾಜ್ಯ ಸರ್ಕಾರ ರೂಪಿಸಿದ್ದ 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆಗಳನ್ನು ರದ್ದು ಮಾಡಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ರಾಜ್ಯ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ಕಡ್ಡಾಯ ಮಾಡಿತ್ತು. ಇದನ್ನು ವಿರೋಧಿಸಿ ಅನುದಾನ‌ರಹಿತ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ಕುರಿತಂತೆ ಶುಕ್ರವಾರ ವಿಚಾರಣೆ ನಡೆಸಿದ ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಹೈಕೋರ್ಟ್ ಪೀಠವು 5 ಮತ್ತು 8 ನೇ ತರಗತಿ ಬೋರ್ಡ್ ಪರೀಕ್ಷೆಯ ಆದೇಶವನ್ನು ರದ್ದು ಪಡಿಸಿ ತೀರ್ಪು ಪ್ರಕಟಿಸಿದೆ.

ಈ ನಡುವೆ, ಶಾಸಕಾಂಗದಲ್ಲಿ ಚರ್ಚೆ ಆಗದೇ ಅಧಿಕಾರಿಗಳೇ ಪಬ್ಲಿಕ್ ಪರೀಕ್ಷೆ ಬಗ್ಗೆ ನಿರ್ಧಾರ ಮಾಡಿದ್ದರು ಎಂಬ ಅರ್ಜಿದಾರರ ಪರ ವಕೀಲರ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು, ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!