ಚಿತ್ರದುರ್ಗ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಆದೇಶ ರದ್ದು

ಚಿತ್ರದುರ್ಗ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಆದೇಶ ರದ್ದು

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಈ ಕುರಿತಂತೆ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿತು.

ಸರ್ಕಾರ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್‌.ವಸ್ತ್ರದ ಅವರನ್ನು ಆಡಳಿತಾಧಿಕಾರಿ ಯಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ, ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಹೈಕೋರ್ಟ್ ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಪೀಠವು, ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡುವ ಅಧಿಕಾರ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಮಠ ಮತ್ತು ಶೈಕ್ಷಣಿಕ ಆಡಳಿತ ನಿರ್ವಹಣೆಗೆ ಪರ್ಯಾಯ ಯೋಜನೆ ರೂಪಿಸಲು ಮಠದ ಭಕ್ತರು ಹಾಗೂ ಲಿಂಗಾಯತ ಸಮುದಾಯದ ಪ್ರಮುಖರು ನಿರ್ಧರಿಸಬಹುದು. ಈ ನಿಟ್ಟಿನಲ್ಲಿ ನಾಲ್ಕು ವಾರಗಳ ಕಾಲ‌ ಸರ್ಕಾರ ನೇಮಿಸಿರುವ ಆಡಳಿತಾಧಿಕಾರಿ ಮುಂದುವರಿಯಬಹುದು ಎಂದು ಹೇಳಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!