Appointment and promotion :‘ಕಾಲಮಿತಿಯೊಳಗೆ ನೇಮಕಾತಿ, ಮುಂಬಡ್ತಿ ಸಿಗದೆ ಅಭ್ಯರ್ಥಿಗಳು ಅವಕಾಶ ವಂಚಿತರಾಗಿದ್ದಾರೆ’ ; ಪ್ರಿಯಾಂಕ್ ಖರ್ಗೆ

'Candidates are deprived of opportunity without getting appointment and promotion within the time limit'; Priyank Kharge

ಬೆಂಗಳೂರು: Appointment and promotion :ಇಲಾಖೆಗಳಲ್ಲಿ ನಿಗದಿತ ಕಾಲಮಿತಿಯೊಳಗೆ ನೇಮಕಾತಿ ಮತ್ತು ಮುಂಬಡ್ತಿಗಳನ್ನು ಹೊಂದದೇ ಅಭ್ಯರ್ಥಿಗಳು ಅವಕಾಶ ವಂಚಿತರಾಗಿ ಅನ್ಯಾಯಕೊಳ್ಳಗಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಸಮಗ್ರ ಏಳಿಗೆಗೆ “ಆರ್ಟಿಕಲ್ 371ಜೆ“ ವರದಾನವಾಗಿದ್ದರೂ, ಸಮರ್ಪಕ ಅನುಷ್ಠಾನದಲ್ಲಿ ನಿಷ್ಠೆ ಇದ್ದರೆ ಮಾತ್ರ ವಿಶೇಷ ಸ್ಥಾನಮಾನದ ಆಶಯಗಳು ಈಡೇರಲಿದೆ ಎಂದು ಅವರು ಹೇಳಿದ್ದಾರೆ.

ನ್ಯಾಯಾಲಯದ ಮುಂದೆ ಹಲವು ವರ್ಷಗಳಿಂದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 47 ಪ್ರಕರಣಗಳು ಬಾಕಿ ಇರುವುದರಿಂದ ಆರ್ಟಿಕಲ್ 371ಜೆ ಅಡಿಯಲ್ಲಿನ ನೇಮಕಾತಿ, ಮುಂಬಡ್ತಿ ವಿಷಯಗಳಲ್ಲಿ ಹಿನ್ನೆಡೆ ಉಂಟಾಗಿದೆ.

ಇಲಾಖೆಗಳಲ್ಲಿ ನಿಗದಿತ ಕಾಲಮಿತಿಯೊಳಗೆ ನೇಮಕಾತಿ ಮತ್ತು ಮುಂಬಡ್ತಿಗಳನ್ನು ಹೊಂದದೇ ಅಭ್ಯರ್ಥಿಗಳು ಅವಕಾಶ ವಂಚಿತರಾಗಿ ಅನ್ಯಾಯಕೊಳ್ಳಗಾಗಿರುತ್ತಾರೆ ಎಂದಿದ್ದಾರೆ.

ಕರ್ನಾಟಕ ಉಚ್ಛ ನ್ಯಾಯಾಲಯದ ಬೆಂಗಳೂರು, ಕಲಬುರಗಿ ಹಾಗೂ ಧಾರವಾಡ ವಿಭಾಗೀಯ ಪೀಠಗಳಲ್ಲಿ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ, ಮುಂಬಡ್ತಿ ಹಾಗೂ ವಿವಿಧ ಸೇವಾ ವಿಷಯಗಳಿಗೆ ಸಂಬಂಧಿಸಿದ ಪ್ರಕರಣಗಳ ಇತ್ಯರ್ಥಪಡಿಸಲು ಅಗತ್ಯ ಕ್ರಮವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.

ಅಭ್ಯರ್ಥಿಗಳು, ಅಧಿಕಾರಿಗಳು ಮತ್ತು ನೌಕರರ ಭವಿಷ್ಯದ ಹಿತದೃಷ್ಟಿಯಿಂದ ಕರ್ನಾಟಕ ಉಚ್ಚನ್ಯಾಯಲಯ ಹಾಗೂ ವಿವಿಧ ವಿಭಾಗೀಯ ಪೀಠಗಳಲ್ಲಿ ಇತ್ಯರ್ಥವಾಗದೇ ಉಳಿದಿರುವ ಪ್ರಕರಣಗಳಲ್ಲಿ ಸ್ಪಷ್ಟವಾದ ಅಗತ್ಯ ಮಾಹಿತಿಯನ್ನು ಕಾಲಮಿತಿಯೊಳಗೆ ಸಲ್ಲಿಸಬೇಕು ಹಾಗೂ ಸರ್ಕಾರಿ ವಕೀಲರೊಂದಿಗೆ ಸಮನ್ವಯ ಸಾಧಿಸಿ ಎಲ್ಲಾ ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲು ಸಂಬಂಧಪಟ್ಟ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ನಿರ್ದೇಶನ ನೀಡಬೇಕು ಎಂದವರು ಮನವಿ ಮಾಡಿದ್ದಾರೆ.

 

 

ಇತ್ತೀಚಿನ ಸುದ್ದಿಗಳು

error: Content is protected !!