ಬ್ರಿಡ್ಜ್‌ಗೆ ಕಾರು ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು

ಬ್ರಿಡ್ಜ್‌ ಕಾರು ಡಿಕ್ಕಿ

ಕೊಪ್ಪಳ: ಬ್ರಿಡ್ಜ್‌ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಕುಕನೂರು ತಾಲ್ಲೂಕಿನ ಬನ್ನಿಕೊಪ್ಪದ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.
ಮೃತಪಟ್ಟವರಲ್ಲಿ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಸೇರಿದ್ದಾರೆ. ಇವರೆಲ್ಲರೂ ತೆಲಂಗಾಣದವರು. ರಾಷ್ಟ್ರೀಯ ಹೆದ್ದಾರಿಯಲ್ಲಿನ ಬ್ರಿಡ್ಜ್‌ಗೆ ಕಾರು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.
ಜಿಲ್ಲೆಯಿಂದ ಗದಗ ಮಾರ್ಗದಲ್ಲಿ ಹೋಗುವಾಗ ಈ ಘಟನೆ ನಡೆದಿದೆ. ಮೃತಪಟ್ಟವರ ವಿವರ ಹುಡುಕಲಾಗುತ್ತಿದೆ ಎಂದು ಹೇಳಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನ ಬಿಡಿಭಾಗಗಳು ರಸ್ತೆ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

Leave a Reply

Your email address will not be published. Required fields are marked *

error: Content is protected !!