caste survey; ಜಾತಿ ಸಮೀಕ್ಷೆ ಸಮಾಜವನ್ನು ವಿಭಜಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಅ.07: ಜಾತಿ ಗಣತಿ (caste survey) ಸಮಾಜವನ್ನು ವಿಭಜಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂದು ಪ್ರಧಾನಿಗಳು ಹೇಳಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬಡತನ ನಿವಾರಣೆ ಕಾರ್ಯಕ್ರಮ ರೂಪಿಸುವಾಗ ಸಮ ಸಮಾಜ ನಿರ್ಮಾಣ ಮಾಡಬೇಕು. ಯಾವ ಜಾತಿ ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಯಾವ ಸ್ಥಿತಿಗತಿಯಲ್ಲಿದೆ ಎಂದು ತಿಳಿಯಬೇಕು. ನಮ್ಮದು ಜಾತಿ ವ್ಯವಸ್ಥೆಯ ಸಮಾಜವಾಗಿದೆ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅಸಮಾನತೆ ಇರುವ ಜಾತಿಗಳನ್ನು ಮುಖ್ಯವಾಹಿನಿಗೆ ತರಲು ಅಂಕಿಅಂಶಗಳು ಅಗತ್ಯ. ಅದಕ್ಕಾಗಿ ಜಾತಿಗಣತಿ ಮಾಡಬೇಕು. ಸಾಮಾಜಿಕ ಆರ್ಥಿಕ ಸಮೀಕ್ಷೆ ಹಾಗೂ ಜಾತಿ ಸಮೀಕ್ಷೆ ಆಗಬೇಕು. ಇದು ಖಂಡಿತವಾಗಿಯೂ ಸಮಾಜವನ್ನು ಒಡೆಯುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಮೋದಿಯವರು ಹೇಳುವುದಕ್ಕೂ, ಮಾಡುವುದಕ್ಕೂ ವ್ಯತ್ಯಾಸವಿದೆ

ನರೇಂದ್ರ ಮೋದಿಯವರು ಎಲ್ಲರನ್ನೂ ಒಳಗೊಂಡ ಸಮಾಜ, ಸಬ್ ಕೆ ಸಾಥ್, ಸಬ್ ಕಾ ವಿಕಾಸ್ ಎನ್ನುತ್ತಾರೆ. ಮುಸಲ್ಮಾನರಿಗೆ ಟಿಕೆಟ್ ಕೊಡದೆ ಹೋದರೆ ಸಬ್ ಕೆ ಸಾಥ್ ಆಗುತ್ತದೆಯೇ, ಎಲ್ಲರನ್ನೂ ಒಳಗೊಂಡಂತೆ ಆಗುತ್ತದೆಯೇ? ಹೇಳುವುದಕ್ಕೂ, ಮಾಡುವುದಕ್ಕೂ ವ್ಯತ್ಯಾಸವಿದೆ. ಹೇಳೋದು ಬೇರೆ, ವಸ್ತುಸ್ಥಿತಿ ಬೇರೆ ಎಂದರು.

Pallakki; ನೂತನ ಪಲ್ಲಕ್ಕಿ ಬಸ್ ಲೋಕಾರ್ಪಣೆಗೊಳಿಸಿದ ಸಿದ್ದರಾಮಯ್ಯ

ನವೆಂಬರ್ ನಲ್ಲಿ ಜಾತಿ ಸಮೀಕ್ಷೆ ವರದಿ ಸಲ್ಲಿಕೆ

ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವರದಿ ಪಡೆಯಲಿಲ್ಲ. ಈಗ ಬೇರೆ ಅಧ್ಯಕ್ಷರಿದ್ದು, ಅವರಿಗೆ ಕಾಂತರಾಜು ವರದಿ ಇದ್ದಂತೆಯೇ ಮಾಡಿಕೊಡುವಂತೆ ಹೇಳಿದ್ದೇನೆ. ಅವರು ನವೆಂಬರ್ ನಲ್ಲಿ ವರದಿ ನೀಡುವುದಾಗಿ ಹೇಳಿದ್ದಾರೆ ಎಂದರು.

ಪ್ರತ್ಯೇಕ ವರ್ಗ; ಸಮೀಕ್ಷೆ ವರದಿ ಬಂದ ನಂತರ ಪರಿಶೀಲನೆ

ಬಹಳ ಹಿಂದುಳಿದವರು ರಾಷ್ಟ್ರೀಯ ಮಟ್ಟದಲ್ಲಿ ಪ್ರತ್ಯೇಕ ವರ್ಗ ಬೇಕು ಎಂದು ಕರ್ನಾಟಕದಲ್ಲಿ ಬೇಡಿಕೆ ಇರುವ ಬಗ್ಗೆ ಉತ್ತರಿಸಿ ಅದನ್ನು ಮಾಡಲು ಹಿಂದುಳಿದ ವರ್ಗಗಳ ಸಮೀಕ್ಷೆ ವರದಿ ಬಂದ ನಂತರ ಪರಿಶೀಲಿಸಲಾಗುವುದು ಎಂದರು.

ಜನರ ಅಹವಾಲು ಕೇಳಲು ಸೂಚನೆ

ಕೇಂದ್ರ ಬರ ಅಧ್ಯಯನ ತಂಡ ಸರಿಯಾಗಿ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಅಧ್ಯಯನ ತಂಡಕ್ಕೆ ಎಲ್ಲೆಡೆ ಭೇಟಿ ಮಾಡಿ, ಜನರ ಅಹವಾಲು ಕೇಳಬೇಕು, ಜನಪ್ರತಿನಿಧಿಗಳ ಮಾತನ್ನೂ ಆಲಿಸುವಂತೆ ಸೂಚಿಸಿದ್ದೇನೆ ಎಂದರು.

new payment system; ಸಿನಿಮಾ ಕಾರ್ಮಿಕರಿಗಾಗಿ ಹೊಸ ವೇತನ ಜಾರಿ, ಸಿನಿ ಕಾರ್ಮಿಕರ ಪರ ನಿಂತ ಚಿತ್ರರಂಗ

ಬರಪೀಡಿತ ಜಿಲ್ಲೆಗಳ ಪಟ್ಟಿ ಕೇಂದ್ರ ತಂಡ ಸಿದ್ಧಪಡಿಸುತ್ತದೆ

ಕೇಂದ್ರ ಬರ ಅಧ್ಯಯನ ತಂಡ ಕಾವೇರಿ ಕಣಿವೆಗೆ ಭೇಟಿ ಮಾಡುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ಅದನ್ನು ನಾವು ತೀರ್ಮಾನಿಸುವುದಿಲ್ಲ. ಕೇಂದ್ರ ತಂಡ ಭೇಟಿ ನೀಡಬೇಕಾದ ಸ್ಥಳಗಳನ್ನು ನಿರ್ಧರಿಸುತ್ತದೆ. ಜಿಲ್ಲೆಗಳನ್ನು ಅವರೇ ಪಟ್ಟಿ ಮಾಡಿಕೊಳ್ಳುತ್ತಾರೆ ಎಂದರು. ಹಸಿರು ಬರ ಇದೆ. ಗಿಡ ಇದ್ದರೆ ಸಾಲದು, ಬೆಳೆ ಬರಬೇಕು ಎಂದರು.

ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂಬ ಶ್ಯಾಮನೂರು ಶಿವಶಂಕರಪ್ಪ ಅವರು ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಮಹಿಷ ದಸರಾ ಸರ್ಕಾರ ಆಚರಿಸಿಲ್ಲ

ಮಹಿಷ ದಸರಾ ಆಚರಿಸುವ ಬಗ್ಗೆ ಮಾತನಾಡಿ ಹಿಂದೆಯೂ ಆಚರಿಸಿದ್ದಾರೆ ಆದರೆ ಚಾಮುಂಡಿ ಬೆಟ್ಟದ ಮೇಲೆ ಆಗಿಲ್ಲ. ಮಹಿಷಾ ದಸರಾ ಎಂದೂ ಸರ್ಕಾರ ಆಚರಿಸಿಲ್ಲ ಎಂದರು.

Leave a Reply

Your email address will not be published. Required fields are marked *

error: Content is protected !!