ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಿಢೀರ್ ರಾಜೀನಾಮೆ ನೀಡಿದ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ದಿಢೀರ್ ರಾಜೀನಾಮೆ ನೀಡಿದ್ದಾರೆ. ಅರುಣ್ ಗೋಯಲ್ ಅಧಿಕಾರಾವಧಿ 2027ರವರೆಗೆ ಇತ್ತು. ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ.
ಚುನಾವಣಾ ವ್ಯವಸ್ಥೆಯ ಸಂಪೂರ್ಣ ಜವಾಬ್ದಾರಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಹೆಗಲ ಮೇಲೆ ಬಿದ್ದಿದೆ. ಗೋಯಲ್ ಅವರ ರಾಜೀನಾಮೆಯಿಂದಾಗಿ ಇದೀಗ ಚುನಾವಣಾ ಸಮಿತಿಯಲ್ಲಿ ಎರಡು ಚುನಾವಣಾ ಆಯುಕ್ತ ಸ್ಥಾನಗಳು ಖಾಲಿಯಾಗಿವೆ.
ಅರುಣ್ ಗೋಯೆಲ್ ಅವರು ಲೋಕಸಭೆ ಚುನಾವಣೆಯ ಸಿದ್ಧತೆಯಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದರು. ವಿವಿಧ ರಾಜ್ಯಗಳಲ್ಲಿ ಸಿದ್ಧತೆ ಪರಿಶೀಲನೆಗಾಗಿ ನಿರಂತರ ಪ್ರವಾಸ ಕೈಗೊಂಡಿದ್ದರು. ಆದರೆ ಇದೇ ವಾರದ ಅಂತ್ಯದೊಳಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ ಎನ್ನುವ ವರದಿಗಳ ಮಧ್ಯೆಯೇ ಅವರು ರಾಜೀನಾಮೆ ನೀಡಿದ್ದಾರೆ. ಅವರ ದಿಢೀರ್ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಅಚ್ಚರಿಗೆ ಕಾರಣವಾಗಿದೆ.

 
                         
                       
                       
                       
                       
                      