CET: ಇಂದಿನಿಂದ ಏಪ್ರಿಲ್14 ರವರೆಗೆ “ಸಕ್ಷಮ” ಉಚಿತ ಸಿಇಟಿ ತರಗತಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ; (CET) ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳ ಪಿಯು ವಿದ್ಯಾರ್ಥಿಗಳಿಗೆ “ಸಕ್ಷಮ” ಉಚಿತ ಸಿಇಟಿ ತರಗತಿಗಳು ನಗರದ ನೂತನ ಪದವಿಪೂರ್ವ ಕಾಲೇಜಿನಲ್ಲಿ ಮಾ.೨೧ ರ ಇಂದಿನಿಂದ ಏಪ್ರಿಲ್ 14 ರವರೆಗೆ ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ “ಸಕ್ಷಮ”ದ ಉಚಿತ ಸಿಇಟಿ ತರಗತಿ ಸಭೆಯಲ್ಲಿ ಮಾಹಿತಿ ನೀಡಿದ ಸಂಸದರು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಖಾಸಗಿ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ, ದಾವಣಗೆರೆ ಜಿಲ್ಲೆ ಇವರುಗಳ ಸಹಯೋಗದಲ್ಲಿ ಅಯೋಜಿಸಿರುವ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ 25 ದಿನಗಳ “ಸಕ್ಷಮ” ಉಚಿತ ಸಿಇಟಿ ತರಗತಿಗಳನ್ನು ಆಯೋಜಿಸಲಾಗಿದೆ.
ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಂದ ಸಿಇಟಿ ತರಗತಿಗಳನ್ನು ಮಾಡಲಾಗುತ್ತದೆ ಹಾಗೂ ಸಿಇಟಿ ಗ್ರಾಂಡ್ ಟೆಸ್ಟ್ ಗಳನ್ನು ನಡೆಸಲಾಗುತ್ತದೆ. “ಸಕ್ಷಮ” ಉಚಿತ ಸಿಇಟಿ ತರಗತಿಗಳು ಗ್ರಾಮಾಂತರ ಹಾಗೂ ನಗರ ಪ್ರದೇಶದಲ್ಲಿರುವ ವಿಜ್ಞಾನ ವಿಷಯ ಓದುತ್ತಿರುವ ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಿಇಟಿ ನೀಟ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳ ಮುಖಾಂತರ ಉತ್ತಮ ರ್ಯಾಂಕ್ ಪಡೆದು ಉನ್ನತ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.
ಜಿಲ್ಲೆಯ 32 ಸರ್ಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳಿಂದ ಆಯ್ಕೆಯಾದ 200 ವಿದ್ಯಾರ್ಥಿಗಳು ಉಚಿತ ಸಿಇಟಿ ತರಬೇತಿಯನ್ನು ಪಡೆಯಲಿದ್ದಾರೆ ಹಾಗೂ ಅಗತ್ಯವಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಸತಿ ವ್ಯವಸ್ಥೆ ಹಾಗೂ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಸುರೇಶ್ ಹಿಟ್ನಾಳ್ , ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕರಿಸಿದ್ದಪ್ಪ, ಖಾಸಗಿ ಕಾಲೇಜುಗಳ ಮುಖ್ಯಸ್ಥರುಗಳಾದ ಶ್ರೀಧರ್, ವೀರೇಶ್ ಪಾಟೀಲ್, ಡಾ.ಜಯಂತ್, ಡಾ.ಜಿ.ಎನ್.ಹೆಚ್ ಕುಮಾರ್, ವಿನಯ್. ಮಂಜಪ್ಪ, ಅರುಣ್ ಕುಮಾರ್, ರಾಮಮೂರ್ತಿ, ಅವಿನಾಶ್, ರಂಗನಾಥ್, ಕುಸಗಟ್ಟಿ, ಶರಣಪ್ಪ, ಪ್ರಸಾದ್ ಬಂಗೇರ ಹಾಜರಿದ್ದರು.