ಸಿ.ಜಿ.ಆಸ್ಪತ್ರೆಗೆ ಡಾ|| ಪ್ರಭಾ ಮಲ್ಲಿಕಾರ್ಜುನ್ ಭೇಟಿ

ದಾವಣಗೆರೆ: ಹರಪನಹಳ್ಳಿ ತಾಲೂಕಿನ ಸಿಂಗ್ರಿಹಳ್ಳಿ ತಾಂಡದಲ್ಲಿ ನಿನ್ನೆ ಮದುವೆ ಸಮಾರಂಭದ ಊಟದ ನಂತರ ಅಸ್ವಸ್ಥರಾದ 22 ಮಕ್ಕಳು ಸೇರಿ 96 ಜನರು ನಗರದ ಸಿಜಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ದಾವಣಗೆರೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ರವರು ಮತ್ತು ಸಮರ್ಥ ಶಾಮನೂರು ಅವರು ಇಂದು ಆಸ್ಪತ್ರೆಯಲ್ಲಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು.