channagiri; ಆಲೂರು ಸೇರಿ ಎಲ್ಲಾ ಗ್ರಾಮಗಳು ಮಾದರಿ ಗ್ರಾಮ ಮಾಡುವೆ: ಶಾಸಕ
ಚನ್ನಗಿರಿ, ಅ.21: ನಮ್ಮ ಸುತ್ತಮುತ್ತಲಿರುವ ಜನರ ಅನುಕೂಲಕ್ಕಾಗಿ ಪ್ರತಿಫಲವನ್ನು ಬಯಸದೆ ಮಾಡುವ ಕೆಲಸ ಕಾರ್ಯಗಳೇ ಸಮಾಜ ಸೇವೆ ಎನಿಸಿಕೊಳ್ಳುತ್ತದೆ. ಇದು ಹಳ್ಳಿ, ನಗರ, ರಾಜ್ಯ, ರಾಷ್ಟ್ರಮಟ್ಟದಲ್ಲೂ ಆಗಬಹುದು ಎಂದು ಚನ್ನಗಿರಿ (Channagiri) ಶಾಸಕ ಬಸವರಾಜು ವಿ ಶಿವಗಂಗಾ ತಿಳಿಸಿದರು.
ಅಂಬೇಡ್ಕರ್,ಗಾಂಧಿ, ನೆಲ್ಸನ್ ಮಂಡೇಲ್, ಅವರೆಲ್ಲ ರಾಷ್ಟ್ರಮಟ್ಟದಲ್ಲಿ ಸಮಾಜ ಸೇವೆ ಮಾಡಿದಂತವರು. ಈ ಮಟ್ಟಕ್ಕೆ ಎಲ್ಲರೂ ಏರಲು ಸಾಧ್ಯವಿಲ್ಲವಾದರೂ ಪ್ರತಿಯೊಬ್ಬರೂ ತಮ್ಮ ತಮ್ಮ ಯೋಗ್ಯತಾನುಸಾರ ಸಮಾಜ ಸೇವೆಯನ್ನು ಮಾಡಬಹುದು ಎಂದು ತಿಳಿಸಿದರು.
‘ಜನಸೇವೆಯೇ ಜನಾರ್ಧನನ ಸೇವೆ’ ಎಂಬ ಗಾದೆಯು ಸಮಾಜ ಸೇವೆಯು ದೇವರ ಪೂಜೆಗಿಂತ ಶ್ರೇಷ್ಠ ಎಂಬುದನ್ನು ತಿಳಿಸುತ್ತದೆ. ಸಾರ್ವಜನಿಕರಿಗೆ ಸರ್ಕಾರದಿಂದ ಆಗಬೇಕಾದ ಗ್ರಾಮದ ರಸ್ತೆ, ಚರಂಡಿ ಸಮಸ್ಯೆ, ಸ್ಮಶಾನ ಜಾಗ, ಇ-ಖಾತೆ ಸಮಸ್ಯೆ, ಕಂದಾಯ ಇಲಾಖೆಗಳಲ್ಲಿ ಆಗಬೇಕಿರುವ ಕೆಲಸ, ಮಾಸಾಶನ, ಕುಡಿಯುವ ನೀರು, ಆಸ್ಪತ್ರೆ, ವೈದ್ಯರು, ಮತ್ತಿತರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ನಿಟ್ಟಿನಲ್ಲಿ ಚನ್ನಗಿರಿ ತಾಲ್ಲೂಕು ಆಡಳಿತ ಹಾಗೂ ಎಲ್ಲಾ ಇಲಾಖೆಗಳ ಸಹಯೋಗದೊಂದಿಗೆ ಜನರ ಸಮಸ್ಯೆಗೆ ಮನೆ ಬಾಗಿಲಿನಲ್ಲಿ ಪರಿಹರಿಸಿ ಧ್ವನಿಯಾಗುವ ಜನತಾ ದರ್ಶನ ಕಾರ್ಯಕ್ರಮ ಯಶಸ್ವಿಯಾಗುತ್ತಿದೆ ಎಂದರು.
sports; ರಾಜ್ಯಮಟ್ಟ ಕ್ರೀಡಾಕೂಟಕ್ಕೆ ಶ್ರೀ ಸೋಮೇಶ್ವರ ವಿದ್ಯಾಲಯ ವಿದ್ಯಾರ್ಥಿಗಳು ಆಯ್ಕೆ
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೇಳಿದಂತೆ ಗ್ಯಾರೆಂಟಿಗಳನ್ನ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ. ಈ ಗ್ರಾಮದಲ್ಲಿ 300ಕ್ಕೂ ಅಧಿಕ ಮಹಿಳೆರು ಗೃಹ ಲಕ್ಷ್ಮಿ ಯೋಜನೆಯಡಿ ತಿಂಗಳಿಗೆ 2 ಸಾವಿರ ಪಡೆಯುತ್ತಿದ್ದಾರೆ, 400 ಕ್ಕೂ ಹೆಚ್ಚು ಮನೆಗಳಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ ಎಂದರು. ಇನ್ನೂ ಬಹುತೇಕ ಎಲ್ಲಾ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಬಸ್ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಸರ್ಕಾರದ ಎಲ್ಲಾ ಯೋಜನೆಗಳು ಫಲಾನುಭವಿಗಳಿಗೆ ತಲುಪಿಸುವ ಕೆಲವನ್ನು ಮಾಡುವೆ, ಈ ತಾಲ್ಲೂಕು ಅಭಿವೃದ್ಧಿಯೇ ನನ್ನ ಗುರಿ ಎಂದರು. ಈ ವೇಳೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್, ಜಿ. ಪಂ. ಸಿಇಓ ಸೇರಿದಂತೆ ಅಧಿಕಾರಿ ವರ್ಗ ಉಪಸ್ಥಿತರಿದ್ದರು. ಕಾರ್ಯಕ್ರಮ ಮೊದಲು ಗ್ರಾಮದಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.