ಚನ್ನಗಿರಿ ಪಕ್ಷೇತರ ಅಭ್ಯರ್ಥಿ ಬೆಂಬಲಿಗ ಭದ್ರಾ ಕಾಲುವೆಗೆ ಬಿದ್ದು ಸಂಶಯಾಸ್ಪದ ಸಾವು

ದಾವಣಗೆರೆ: ಚನ್ನಗಿರಿ ಪಕ್ಷೇತರ ಅಭ್ಯರ್ಥಿ ಬೆಂಬಲಿಗರು ಚಾನಲ್ ಬಳಿ ಪಾರ್ಟಿಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಓರ್ವ ವ್ಯಕ್ತಿಯು ಕಾಲುವೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಚನ್ನಗಿರಿ ತಾಲ್ಲೂಕಿನ ಸಂತೆಬೆನ್ನೂರು ಹೋಬಳಿಯ ದೊಡ್ಡ ಮಲ್ಲಾಪುರ ಬಳಿಯ ಭದ್ರಾ ಎಡದಂಡೆ ಕಾಲುವೆ ಬಳಿ ಸುಮಾರು 50 ಕ್ಕೂ ಹೆಚ್ಚು ಚನ್ನಗಿರಿ ಪಕ್ಷೇತರ ಅಭ್ಯರ್ಥಿ ಬೆಂಬಲಿಗರು ಇಂದು ರಾತ್ರಿ ವೇಳೆ ಕಾಲುವೆ ಪಕ್ಕದಲ್ಲಿ ಕುಳಿತುಕೊಂಡು ಮದ್ಯಪಾನ ಮಾಡುತ್ತಾ ಊಟ ಮಾಡುತ್ತಿದ್ದರಂತೆ. ಕಾಲುವೆ ಪಕ್ಕದಲ್ಲಿ ಕುಳಿತಿದ್ದ ನಾಗಾನಾಯ್ಕ್ (35) ಕಾಲುವೆಗೆ ಬಿದ್ದು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಚನ್ನಗಿರಿಯಲ್ಲಿ ಪ್ರಚಾರ ಮುಗಿಸಿಕೊಂಡ ನಂತರ ಎಲ್ಲರೂ ಸೇರಿಕೊಂಡು ಪಾರ್ಟಿ ಮಾಡುತ್ತಿದ್ದಾರೆ. ಈ ವೇಳೆ ಮದ್ಯಪಾನ ಮಾಡುತ್ತಿದ್ದ ಬಗ್ಗೆ ಪ್ರತ್ಯಕ್ಷವಾಗಿ ನೋಡಿರುವವರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸಂತೆಬೆನ್ನೂರು ಪೊಲೀಸ್ ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಈ ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸದೆ ಆದಷ್ಟೂ ಬೇಗನೆ ಅಂತ್ಯಕ್ರಿಯೆ ನಡೆಸಲು ಕುಟುಂಬದ ಸದಸ್ಯರಿಗೆ ತಿಳಿಸಿದ್ದಾರೆ ಎಂದು ನಂಬಿಕಸ್ಥ ಮೂಲಗಳಿಂದ ಮಾಹಿತಿ ಲಭ್ಯವಾಗಿದ್ದುಈ ಸಾವಿನ ಬಗ್ಗೆ ಹೆಚ್ಚಿನ ತನಿಖೆಗೆ ಸ್ಥಳೀಯರು ಒತ್ತಾಯಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.