ಚನ್ನಗಿರಿಯಲ್ಲಿ ಕುರಿ ಸಾಗಾಣೆ ಲಾರಿ ಪಲ್ಟಿ
ದಾವಣಗೆರೆ: ಕುರಿಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿರುವ ಘಟನೆ ಚನ್ನಗಿರಿ ತಾಲೂಕಿನ ರಾಜಗೊಂಡನಹಳ್ಳಿಯಲ್ಲಿ ಇಂದು ನಡೆದಿದೆ.
ನೂರಾರು ಕುರಿಗಳನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಆದರೆ, ಚಾಲಕನ ನಿರ್ಲಕ್ಷತನದ ಚಾಲನೆಯಿಂದ ಲಾರಿ ಪಲ್ಟಿಯಾಗಿದ್ದು ಅದೃಷ್ಟವಶಾತ್ ಕುರಿಗಳಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.