ಛತ್ರಪತಿ ಶಿವಾಜಿ ಅವರು ಸರ್ವ ಜನಾಂಗದ ನಾಯಕರು: ದಿನೇಶ್ ಕೆ ಶೆಟ್ಟಿ
ದಾವಣಗೆರೆ : ಛತ್ರಪತಿ ಶಿವಾಜಿ ಮಹಾರಾಜರು ಸರ್ವ ಜನಾಂಗದ ನಾಯಕರಾಗಿದ್ದು ಅವರನ್ನು ಒಂದು ಜನಾಂಗಕ್ಕೆ ಸೀಮಿತಗೊಳಿಸುವುದು ಬೇಡ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಕೆ. ಶೆಟ್ಟಿ ಅವರು ಅಭಿಪ್ರಾಯ ಪಟ್ಟರು.
ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ರಾಮ್ ಅಂಡ್ ಕೋ ವೃತ್ತದಲ್ಲಿ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಛತ್ರಪತಿ ಶಿವಾಜಿ ಮಹಾರಾಜರು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದ್ದರು ಅವರ ಆಡಳಿತದಲ್ಲಿ ಎಲ್ಲಾ ವರ್ಗದವರಿಗೂ ಪ್ರಾತಿನಿಧ್ಯ ನೀಡಿದ್ದರು ಎಂಬುದನ್ನು ನಾವೆಲ್ಲ ತಿಳಿದುಕೊಳ್ಳಬೇಕೆಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಶಿವಕುಮಾರ್ ಮಾತನಾಡಿ ಛತ್ರಪತಿ ಶಿವಾಜಿ ಮಹಾರಾಜರು ಉತ್ತಮ ಆಡಳಿತ ಅಧಿಕಾರಿ ಆಗಿದ್ದರು ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಸದಸ್ಯ ಎ. ನಾಗರಾಜ್ ಮಾತನಾಡಿ ಛತ್ರಪತಿ ಶಿವಾಜಿ ಮಹಾರಾಜರು ತಮ್ಮ ಆಡಳಿತದಲ್ಲಿ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಿದ್ದರು ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್ ಮಲ್ಲಿಕಾರ್ಜುನ್ ಮಾತನಾಡಿ ಛತ್ರಪತಿ ಶಿವಾಜಿ ಮಹಾರಾಜರ ಕಾಲದಲ್ಲಿ ದೇಶ ಸುಭಿಕ್ಷೆಯಿಂದ ಕೂಡಿತ್ತು ಎಂದರು.
17ನೇ ವಾರ್ಡಿನ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಧು ಪವಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಡಿ. ಎನ್. ಜಗದೀಶ್ , ವಿಜಯ್ ಜಾದವ್ ಪರಶುರಾಮ್ ಗೋಪಾಲ್ ರುದ್ರಮುನಿ ಸ್ವಾಮಿ ರಾಜು ಚೌಹಾನ್ ರವಿ ಶಿವಾಜಿ ರಾವ್, ಕೇರಂ ಗಣೇಶ್, ಟಿ. ರಮೇಶ್, ಶ್ರೀಕಾಂತ್ ಬಗೆರ, ದ್ರಾಕ್ಷಾಯಣಮ್ಮ , ರಾಜೇಶ್ವರಿ ಯುವರಾಜ್ ಆನೇ ಸಿದ್ಧ ಮತ್ತಿತರರು ಪಾಲ್ಗೊಂಡಿದ್ದರು.